Skip to main content

ಹಿಂದೂ ದಮ೯ದ ನಾನು ಮುಸ್ಲಿಂ ದಮ೯ದ ಗನ್ನಿಸಾಹೇಬರಿಗೆ ಮೆಕ್ಕಾ ಯಾತ್ರೆ ಮಾಡಿಸಿದ್ದು

     ಹಿಂದೂ ದಮ೯ದವನು ಮುಸ್ಲಿ೦ ಗೆಳೆಯರಿಗೆ ಮೆಕ್ಕಾ ಯಾತ್ರೆ ಮಾಡಿಸಬಹುದೆ? ಮುಸ್ಲಿಂ ಗೆಳೆಯ ಈ ರೀತಿ ಮೆಕ್ಕಾ ಯಾತ್ರೆ ಮಾಡಿದರೆ ಹರಾಂ ಅಂತೆ ಅಂತ ಒಂದು ಸುದ್ದಿ ನಮ್ಮ ಊರಲ್ಲಿ ಪ್ರಾರಂಭವಾಗಿತ್ತು.
    ಬಹುಶಃ ಇದು ಅಪರೂಪದ ಪ್ರಕರಣ ಆದ್ದರಿಂದ ಸ್ಥಳೀಯರಿಗೆ ಇದರ ಬಗ್ಗೆ ಸರಿಯಾದ ತಿಳುವಳಿಕೆ ಇರಲಿಲ್ಲ, ಜೊತೆಗೆ ಮತ್ಸರ, ಹೊಟ್ಟೆಕಿಚ್ಚು ಬೇರೆ ಸೇರಿದ್ದರಿಂದ ಮೆಕ್ಕಾ ಯಾತ್ರೆಗೆ ತಯಾರಿ ನಡೆಸಿದವರಿಗೆ ಒಂದು ರೀತಿ ಕಿರಿಕಿರಿ ಆದರೆ, ಮೆಕ್ಕಾ ಯಾತ್ರೆ ಮಾಡಿಸಲು ಹೊರಟ ಹಿಂದೂ ದಮಿ೯ಯನಿಗೆ ಹಿಂದಿನಿಂದ ಹೋಗಿ ಹೋಗಿ ಸಾಬರಿಗೆ ಮೆಕ್ಕಾ ಕಳಿಸಲು ಅವನಿಗೆ ಬುದ್ಧಿ ಇಲ್ಲ ಅಂತ ಕುಹಕ ಬೇರೆ.
      ಇದು ನಾನೂ ಮತ್ತು ನನ್ನ ಹಿರಿಯ ಮಿತ್ರರಾದ ಗನ್ನಿ ಸಾಹೇಬರು 2007 ರಲ್ಲಿ ಅನುಭವಿಸಿದ ಪ್ರಕರಣವಿದು, ಇದಕ್ಕೆ ಒಂದು ಸಕಾರಣ ಇತ್ತು ಮತ್ತು ನಮ್ಮುರ ದೇವಸ್ಥಾನದಲ್ಲಿ ನಾನು ಗನ್ನಿಸಾಬರಿಗೆ ಒಂದು ಮಾತು ಕೊಟ್ಟಿದ್ದೆ.
     2006ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿಯ ಯಡೇಹಳ್ಳಿ ಎಂಬ ನಮ್ಮ ಊರಲ್ಲಿ ಗಣಪತಿ ದೇವಸ್ಥಾನ ಕಟ್ಟಿಸಿ ಪ್ರತಿಷ್ಟಾಪನೆ ನಡೆಯಿತು, ಅಲ್ಲಿವರೆಗೆ ಇಡಿ ಹೋಬಳಿಯಲ್ಲಿ ಗಣಪತಿ ದೇವಸ್ಥಾನವೇ ಇರಲಿಲ್ಲ, ಯಡೇಹಳ್ಳಿಯಲ್ಲಿ ಎರಡು ಚಚ್೯ ಮತ್ತು ಒಂದು ಮಸೀದಿ ಇತ್ತು, ಗಣಪತಿ ದೇವಸ್ಥಾನದ ದೇವರ ವಿಗ್ರಹ ಕೋಲಾರ ಜಿಲ್ಲೆಯ ಶಿವಾರಪಟ್ಟಣದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತರಿಂದ ಕೃಷ್ಣ ಶಿಲೆಯಲ್ಲಿ ಕೆತ್ತಿಸಿ ತಂದಾಗ ವಿಗ್ರಹವನ್ನ ಯಡೇಹಳ್ಳಿ ವೃತ್ತದಿಂದ ಮೆರವಣಿಗೆಯಲ್ಲಿ ದೇವಸ್ಥಾನದವರೆಗೆ ನಾನು ಗನ್ನಿಸಾಹೇಬರು ಒಟ್ಟಾಗಿ ಹೋದೆವು, ಅಲ್ಲಿ ಕ್ರಿಶ್ಚಿಯನ್ ಅಂದ ಕಲಾವಿದ ಒಲೆಯನ್ ಡಿಸೋಜ ಮತ್ತು ದಲಿತ ಕಲಾವಿದ ಬೋರಯ್ಯ ಸಣ್ಣ ರಸ ಮಂಜರಿ ಕಾಯ೯ಕ್ರಮ ನಡೆಸಿಕೊಟ್ಟರು, ದೇವರ ವಿಗ್ರಹ ಗಭ೯ಗುಡಿಯ ಒಳಕ್ಕೆ ಹೋಗುವಾಗ ಅಚಾನಕ್ಕಾಗಿ ನನ್ನ ಬಾಯಿ೦ದ ಒಂದು ಮಾತು ಹೊರಬಿತ್ತು.
        ಗನ್ನಿ ಸಾಹೇಬರೆ ದೇವರ ಸತ್ಯವಿದ್ದರೆ ಈ ವಷ೯ ನಿಮ್ಮನ್ನ ಮೆಕ್ಕಾ ಯಾತ್ರೆಗೆ ಕಳಿಸುತ್ತೇನೆ, ಹಾಗಾದರೆ ಈ ದೇವಸ್ಥಾನ ಕಟ್ಟಿಸಿದ ಪುಣ್ಯ ಗ್ಯಾರಂಟಿ ನನಗೆ ತಲುಪಿದಂತೆ ಆಗುತ್ತೆ ಅಂದೆ ಅದಕ್ಕೆ ಪ್ರತ್ಯುತ್ತರವಾಗಿ ಅವರು ಗ್ಯಾರಂಟಿ ಆಗೇ ಆಗುತ್ತೆ ಅಂತ ಕೈ ಮುಗಿದರು.
        ಅದರಂತೆ ಗನ್ನಿ ಸಾಹೇಬರು ಮೆಕ್ಕಾ ಯಾತ್ರೆಗೆ ಅಜಿ೯ ಸಲ್ಲಿಸಿದಾಗ ಸಕಾ೯ರದಿಂದ ಆಯ್ಕೆ ಆದರು ಅದಕ್ಕೆ ನಿಗದಿ ಮಾಡಿದ ಹಣ ನಾನು ಡಿ.ಡಿ.ಮೂಲಕ ಪಾವತಿ ಮಾಡಿದೆ, ಅವರು ತಮ್ಮ ದಮ೯ದ ಪವಿತ್ರ ಯಾತ್ರೆಗೆ ತಯಾರಿ ನಡೆಸಿದರು ಅಷ್ಟರಲ್ಲೆ ಈ ಅನುಮಾನದ ಅಪವಾದ ಶುರುವಾಯಿತು.
         ನಮ್ಮಿಬ್ಬರ ಉತ್ಸಾಹಕ್ಕೆ ಒಂದು ರೀತಿ ತಣ್ಣಿೀರು ಎರಚಿದ೦ತೆ ಆಯಿತು, ಗನ್ನಿ ಸಾಹೇಬರು ಯಾರು ಏನೇ ಹೇಳಿದರೂ ನಾನು ಮೆಕ್ಕಾ ಯಾತ್ರೆ ಮಾಡ್ತಿನಿ ಅಂದರಾದರೂ ನನಗೂ೦ದು ಅಳಕು ಇತ್ತು. ಅನ್ಯ ದಮ೯ದವರ ಹಣದಲ್ಲಿ ಮುಸ್ಲಿಂರು ಮೆಕ್ಕಾ ಯಾತ್ರೆ ಮಾಡಿದರೆ ಹರಾಂ ಆಗುವುದಾದರೆ ಸರಿ ಅಲ್ಲ ಅಂತ ಅನ್ನಿಸುತ್ತಿತ್ತು.
       ಅವರ ಸಂಬಂದಿ ಕೆಲ ಯುವಕರು ಗನ್ನಿಸಾಹೇಬರನ್ನ ಹಿಂದಿನಿಂದ ಅವರ ಸಂಬಂದಿ ಗೆಳೆಯರ ಎದುರು ಹಿಯಾಳಿಸುತ್ತಿದ್ದರು ಇದೇ ಸಂದಭ೯ದಲ್ಲಿ ಉತ್ತರ ಪ್ರದೇಶದ ಮೌಲವಿಗಳು ಆನಂದಪುರಂನ ಮಸೀದಿಗೆ ಬಂದರು ಆ ದಿನ ಶುಕ್ರವಾರದ ನಮಾಜು ಬೇರೆ, ನಮಾಜು ಮುಗಿದ ನಂತರ ಈ ಜಿಜ್ಞಾಸೆಗೆ ಉತ್ತರ ಅವರಿ೦ದ ಕೇಳಿದರು, ಅನೇಕ ಗನ್ನಿ ಸಾಹೇಬರ ಆಪ್ತರಿಗೆ ಮತ್ತು ಕೆಲ ಕುಹಕಿಗಳಿಗೆ ಏನು ಉತ್ತರ ಬರಬಹುದು ಅಂತ ಕುತೂಹಲವಿತ್ತು.
          ಮುಸ್ಲಿ೦ ಪಂಡಿತರು ಈ ಬಗ್ಗೆ ಇರುವ ಪತ್ವಾ ಏನಂತ ತಿಳಿಸಿದರು ಅದೇನೆಂದರೆ ಯಾರೇ, ಯಾವ ದಮ೯, ಯಾವುದೇ ಜಾತಿ, ಯಾವ ದೇಶದವರೂ ಯಾವುದೇ ಮುಸ್ಲಿಂ ದಮ೯ದವರನ್ನ ಮಾತ್ರ ಮೆಕ್ಕಾ ಯಾತ್ರೆಗೆ ಕಳಿಸಬಹುದು, ಇದು ಅವರ ನೆರವಿಂದ ಹೋದವರಿಗೆ ಹರಾಂ ಅಲ್ಲ ಮತ್ತು ಮೆಕ್ಕಾ ಯಾತ್ರೆ ಮಾಡಿಸಿದವರಿಗೆ ಡಬಲ್ ಪುಣ್ಯ ಅಂತ ಅಂದರು, ನಮ್ಮ ಗನ್ನಿ ಸಾಹೇಬರಿಗೆ ಇದರಿಂದ ತುಂಬಾ ನಿರಾಳವಾಯಿತು, ನನಗೂ ಸಂತೋಷವಾಯಿತು.
        ನಮ್ಮ ಶ್ರೀವರ ಸಿದ್ಧಿವಿನಾಯಕ ದೇವಾಲಯದಲ್ಲಿ ಗನ್ನಿ ಸಾಹೇಬರಿಗೆ ಸನ್ಮಾನ ಇಟ್ಟುಕೊಂಡಿದ್ದೆವು ಸಾಗರದಿಂದ ತೀನಾ.ಶ್ರೀನಿವಾಸ, ಕೋಯಾ ಸಾಹೇಬರು, ಪುತ್ತೂರಾಯರು, ನಾರಾಯಣ್ ರಾವ್, ಅಮೃತ್ ರಾಸ್ ಎಲ್ಲಾ ಬಂದಿದ್ದರು.
      ಊರ ದೇವಸ್ಥಾನ ಕಟ್ಟಿಸಿದ್ದು ನಮ್ಮ ಹೆತ್ತವವರ ಪುಣ್ಯದಿಂದ ಅಂತ ಬಾವಿಸಿದ್ದೇನೆ ಅದೇ ರೀತಿ ಗನ್ನಿ ಸಾಹೇಬರಿಗೆ ಮೆಕ್ಕಾ ಯಾತ್ರೆ ಮಾಡಿಸಿದ್ದು ಕೂಡ.

https://youtu.be/cydTLQhVy08

Comments

  1. Wonderful. Society needs more people like u sir. God bless u both

    ReplyDelete

Post a Comment

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...