ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ. ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು. ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು. ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ. ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...