Skip to main content

ಹಿರೇಬಾಸ್ಕಾರ ಡ್ಯಾಮ್ ಲಿಂಗನಮಕ್ಕಿ ಡ್ಯಾ೦ನಿ೦ದ ಶರಾವತಿ ನದಿಯಲ್ಲಿ ಮುಳುಗಿದ ಕಥೆ


#ಇದು ಸಾಗರ ತಾಲ್ಲೂಕಿನ ಶ್ರೀ ಗಜಾನನ ಶಮಾ೯ರ ಪೇಸ್‌ಬುಕ್ ಪೋಸ್ಟ್#

     ಶರಾವತಿ ನದಿ ನೀರು ಮಳೆ ಇಲ್ಲದೆ ಬತ್ತಿದಾಗ ಕಾಣುವ ಲಿಂಗನಮಕ್ಕಿ ಪೂವ೯ದ ಜಲ ವಿದ್ಯುತ್ ಯೋಜನೆ ಆಗಿದ್ದ ಹಿರೇಬಾಸ್ಕರ ಬಗ್ಗೆ ಅತ್ಯುತ್ತಮ ಮಾಹಿತಿ ಇದಾಗಿದೆ, ಅಲ್ಲಿಗೆ ತಲುಪುವುದು ದುಸ್ತರ ಆದರು ಅಲ್ಲಿಗೆ ಹೋಗಿ ಅಮೂಲ್ಯ ಚಿತ್ರ ತೆಗೆದಿದ್ದಾರೆ ಮುಂದಿನ ಪೀಳಿಗೆಗಾಗಿ ಈ ಲೇಖನ ನನ್ನ ಬ್ಲಾಗ್‌ನಲ್ಲಿ ಪ್ರಕಟಿಸಿದ್ದೇನೆ.

    # ಅರ್ಧ ಶತಮಾನದಿಂದ  ಲಿಂಗನಮಕ್ಕಿಯಲ್ಲಿ ಮುಳುಗಿದ್ದರೂ ಸುಸ್ಥಿರವಾಗಿರುವ ಹಿರೇಭಾಸ್ಕರ ಆಣೆಕಟ್ಟು.#

                             ಅದು ೧೯೩೭-೩೮ ರ ಅವಧಿ. ಮಾದರಿ ಮೈಸೂರಿನ ನಿರ್ಮಾತೃ ನಾಲ್ವಡಿಯವರು ಮಹಾಮಾತ್ಯ ಮುತ್ಸದ್ದಿ  ಮಿರ್ಜಾ ಇಸ್ಮಾಯಿಲ್ಲರ ದಿವಾನಗಿರಿಯಲ್ಲಿ ನಾಡು ಕಟ್ಟುವ ಕಾಯಕದಲ್ಲಿ ನಿರತರಾಗಿದ್ದ ಕಾಲ. ಶಿವನಸಮುದ್ರದ ವಿದ್ಯುತ್ ಸ್ಥಾವರದ ಎಲ್ಲ ವಿಸ್ತರಣೆ ಮುಗಿದು ಅದರ ಸಾಮರ್ಥ್ಯ ೪೫ ಮೆಗಾವಾಟ್ಟಿಗೆ ಮುಟ್ಟುವ ಹಂತ.ಶಿಂಷಾದಲ್ಲಿ ೧೭.೨ ಮೆಗಾವಾಟ್ ಸಾಮರ್ಥ್ಯದ ಹೊಸ ವಿದ್ಯುದಾಗರ ಕಾರ್ಯಾರಂಭಕ್ಕೆ ಅಣಿಗೊಳ್ಳುತ್ತಿದ್ದ ಸಂದರ್ಭ. ಆದರೂ ಮೈಸೂರು ರಾಜ್ಯಕ್ಕೆ ವಿದ್ಯುತ್ ಕೊರತೆಯ ಭಯ.ಮಹಾರಾಜರು ನಿವೃತ್ತ ಮುಖ್ಯ ಇಂಜಿನಿಯರ್ ಎಸ್ ಕೆ ಶೇಷಾಚಾರ್ ನೇತೃತ್ವದಲ್ಲಿ ಪವರ್ ಕಮಿಟಿಯೊಂದನ್ನು ನೇಮಕ ಮಾಡಿ, ವಿದ್ಯುತ್ ಕೊರತೆ ಉಂಟಾಗದಂತೆ ಕೈಗೊಳ್ಳಬೇಕಿರುವ ಉಪಕ್ರಮಗಳ ಕುರಿತು ಸಲಹೆ ನೀಡಲು ಸೂಚಿಸಿದಾಗ ಆ ಕಮಿಟಿ ನೀಡಿದ ಸಲಹೆ ಶರಾವತಿಯನ್ನು ಪಳಗಿಸಬೇಕೆಂದು. ಸರಿ, ಕೃಷ್ಣರಾವ್ ಎಂಬ ತಜ್ಞ ಸಿವಿಲ್ ಇಂಜಿನಿಯರ ಮೂಲಕ ಸರ್ವೆ ನಡೆಸಿ  ಶರಾವತಿಯಿಂದ ವಿದ್ಯುತ್ ಉತ್ಪಾದಿಸುವ ಉದ್ದೇಶಕ್ಕೆ  ನಿರ್ಮಿಸಲು ತೊಡಗಿದ  ಆಣೆಕಟ್ಟೆಯೇ ಹಿರೇಭಾಸ್ಕರ ಅಥವಾ ಮಡೇನೂರು ಆಣೆಕಟ್ಟೆ.
         ಈ ಯೋಜನೆಗಾಗಿ ೧೯೩೯ ರ ಫೆಬ್ರುವರಿ ಐದರಂದು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಜೋಗದಲ್ಲಿ ಅಡಿಗಲ್ಲನ್ನಿಡುತ್ತಾರೆ. ಶ್ರೀ ಸುಬ್ಬರಾವ್ ಎಂಬ ಅಧೀಕ್ಷಕ ಇಂಜಿನಿಯರ್ ನೇತೃತ್ವದಲ್ಲಿ ಮಡೇನೂರಿನಲ್ಲಿ ೧೧೪ ಅಡಿ ಎತ್ತರದ ಸುಮಾರು ಇಪ್ಪತ್ತೈದು
ಟಿ ಎಂ ಸಿ ಸಂಗ್ರಹ ಸಾಮರ್ಥ್ಯದ ಜಲಾಶಯದ ನಿರ್ಮಾಣಕಾರ್ಯ ಆರಂಭವಾಗುತ್ತದೆ.
ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ ನಿರ್ಮಾಣವಾಗುತ್ತದೆ. ಜಲಾಶಯದ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಲು ನಿಯಂತ್ರಿತವಾಗಿ ಹೊರಬಿಡಲು ಆರು ಗೇಟುಗಳನ್ನು ಅಳವಡಿಸಲಾದರೆ,ಪ್ರವಾಹದ ನೀರನ್ನು ಹೊರಗೆ ಹಾಕಲು ವಿಶೇಷ ಮಾದರಿಯ ಹನ್ನೊಂದು ಸೈಫನ್ ಗಳನ್ನು ಅಳವಡಿಸಲಾಯಿತು.ಈ  ಸೈಫನ್ಗಳು ವೊಲ್ಯೂಟ್ ಮಾದರಿಯ ಸೈಫನ್ಗಳಾಗಿದ್ದು ಇವನ್ನು ತಜ್ಞ ಸಿವಿಲ್ ಇಂಜಿನಿಯರ್ ಗಣೇಶ ಐಯ್ಯರ್ ರವರು ನಿರ್ಮಿಸಿರುತ್ತಾರೆ.ಇವುಗಳು ಸುಮಾರು ಹದಿನೆಂಟು ಅಡಿ ವ್ಯಾಸವನ್ನು ಹೊಂದಿದ್ದು,ತಲಾ ಹನ್ನೊಂದು ಸಾವಿರ ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಹೊರಹಾಕುವ ಸಾಮರ್ಥ್ಯ ಹೊಂದಿವೆ. ಹಿರೇಭಾಸ್ಕರವನ್ನು ಕುರಿತು ಬರೆದ ಅನೇಕ ಲೇಖನಗಳಲ್ಲಿ,ಈ ಆಣೆಕಟ್ಟು ಸರ್ ಎಂ ವಿಶ್ವೇಶ್ವರಯ್ಯನವರ ನಿರ್ಮಾಣವರಂದು ತಪ್ಪಾಗಿ ಉಲ್ಲೇಖಿಸಿರುವುದು ಕಂಡುಬರುತ್ತದೆ.ಆದರೆ ಈ ಆಣೆಕಟ್ಟೆಗೂ ಸರ್ ಎಂ ವಿ ಯವರಿಗೂ ಯಾವುದೇ ಸಂಬಂಧವಿರುವುದಿಲ್ಲ.
                         ಈ ಜಲಾಶಯ ತನ್ನ ನಿರ್ಮಾಣ ಮುಕ್ತಾಯವಾದ ಹದಿನಾರೇ ವರ್ಷದಲ್ಲಿ ಮುಳುಗಿಹೋಗುವಂತಾದದ್ದು  ನಾಡಿನ ದೌರ್ಭಾಗ್ಯ.ಈ ಜಲಾಶಯ ೧೯೪೭ರಲ್ಲಿ ಪೂರ್ಣಗೊಂಡು ಅದೇ ವರ್ಷ ಇದರಲ್ಲಿ ಜಲಸಂಗ್ರಹಣೆ ಆರಂಭವಾಗುತ್ತದೆ.ಇದರ ನೀರನ್ನು ಬಳಸಿ ವಿದ್ಯುತ್ ಉತ್ಪಾದಿಸುವ ಮಹಾತ್ಮಾ ಗಾಂಧೀ ಜಲವಿದ್ಯುದಾಗರ  ೧೯೪೮ರ ಫೆಬ್ರವರಿ ೨೧ರಂದು ಆರಂಭಗೊಳ್ಳುತ್ತದೆ. ಇದು ಒಟ್ಟು ೧೨೦ ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿತ್ತು. ಆದರೆ ಮುಂದೆ ೧೯೫೬ ರಲ್ಲಿ ಹಳೆಯ ಮೈಸೂರು ರಾಜ್ಯ ವಿಶಾಲ ಕರ್ನಾಟಕವಾಗಿ ವಿಸ್ತರಣೆಗೊಂಡಾಗ ರಾಜ್ಯದಲ್ಲಿ ವಿದ್ಯುತ್ ಕೊರತೆ ತೀವ್ರವಾಯಿತು.ಸರ್ಕಾರ ಹೆಚ್ ಇ ಸಿ ಪಿ ಯ ಮೂಲಕ ಶರಾವತಿಯ ಪೂರ್ಣ ಸಾಮರ್ಥ್ಯ ಬಳಸಲು ಉದ್ದೇಶಿಸಿದಾಗ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟುವುದು ಅನಿವಾರ್ಯವಾಯಿತು.೧೯೬೪ ರಲ್ಲಿ ಲಿಂಗನಮಕ್ಕಿ ಆಣೆಕಟ್ಟೆ ನಿರ್ಮಾಣವಾದಾಗ ಹಿರೇಭಾಸ್ಕರ ಅದರಲ್ಲಿ ಸಂಫೂರ್ಣ ಮುಳುಗಡೆಯಾದದ್ದಲ್ಲದೇ ಅದರ ಮೇಲೆ ಸುಮಾರು ನಲವತ್ತೊಂದು ಅಡಿ ನೀರು ನಿಲ್ಲತೊಡಗಿತು.ಲಿಂಗನಮಕ್ಕಿಯ ಪೂರ್ಣಮಟ್ಟ ಸಮುದ್ರಮಟ್ಟದಿಂದ ೧೮೧೯ ಅಡಿ ; ಆದರೆ ಹಿರೇಭಾಸ್ಕರ ೧೭೭೮ ಅಡಿ. ಹೀಗೆ ಹಿರೇಭಾಸ್ಕರ ೧೯೬೪ ರಿಂದ ಪ್ರತಿವರ್ಷ ಮುಳುಗಡೆಯಾಗುತ್ತದೆ.ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾದಾಗ ಇದು ನಮ್ಮ ಕಣ್ಣಿಗೆ ಬೀಳುತ್ತದೆ.ಪ್ರತಿವರ್ಷ ಮೇ ತಿಂಗಳ ಅಂತ್ಯ ಇದನ್ನು ನೋಡಲು ಸೂಕ್ತಕಾಲ.ಈ ವರ್ಷ ಲಿಂಗನಮಕ್ಕಿ ಮಟ್ಟ ತುಂಬ ಇಳಿದಿದ್ದರಿಂದ ಇದನ್ನು ಕಾಣಲು ಸುಸಂದರ್ಭ.ಹಾಗಾಗಿ ಕಳೆದವಾರ ನಾವು ಕೆಲವರು ಈ ಜಲಾಶಯವನ್ನು ನೋಡಿಬಂದೆವು. ಅಂದಿನ ನಿರ್ಮಾತೃಗಳ ಕರ್ತೃತ್ವ ಶಕ್ತಿಗೆ ನಿದರ್ಶನವಾಗಿ ,ಆ ಆಣೆಕಟ್ಟು ನೀರಿನಲ್ಲಿ ಮುಳುಗಿ ಐವತ್ತಕ್ಕೂ ಹೆಚ್ಚು ವರ್ಷವಾದರೂ ಅತ್ಯಂತ ಸುಸ್ಥಿತಿಯಲ್ಲಿ ಇಂದಿಗೂ ಇದೆಯೆಂದರೆ ನಮಗೆ ಆಶ್ಚರ್ಯವಾಗುತ್ತದೆ.ಅದರ ಎರಡೂ ಬದಿಗೆ  ಲಿಂಗನಮಕ್ಕಿ ಹಿನ್ನೀರು ತುಂಬಿದ್ದರೂ ಅದು ಅದ್ಭುತವಾಗಿ ಗೋಚರಿಸುತ್ತದೆ.ನೋಡಿ ಮಡೇನೂರು ಅರ್ಥಾತ್ ಹಿರೇಭಾಸ್ಕರ ಜಲಾಶಯದ ಕೆಲವು ಚಿತ್ರಗಳನ್ನು!

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...