Skip to main content

ಹಾಸ್ಯ ನಟ ಬಾಲಕೃಷ್ಣ ರಂಗ ಮಂದಿರ ಆನಂದಪುರ೦ನಲ್ಲಿ ನಿಮಿ೯ಸಿದ ನೆನಪು.

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ, ಪೋಷಕ ನಟ ಟಿ.ಎನ್. ಬಾಲಕೃಷ್ಣ ಕುರಿತ ವಿಶೇಷ ಸಂಗ್ರಹಿತ ಲೇಖನ :

ಟಿ.ಎನ್.ಬಾಲಕೃಷ್ಣ (ಬಾಲಣ್ಣ) :

ಕನ್ನಡ ಚಿತ್ರರಂಗದ ಅತ್ಯಂತ ಪ್ರತಿಭಾವಂಥ ನಟರಲ್ಲೊಬ್ಬರು. ಇವರು ಕನ್ನಡದ ಜನತೆಯನ್ನು ಹಲವು ದಶಕಗಳ ಕಾಲ ತಮ್ಮ ತೀಕ್ಷ್ಣ ಹಾಗು ನೈಜ ಅಭಿನಯದಿಂದ ರಂಜಿಸಿದ್ದಾರೆ. ಕನ್ನಡ ಚಿತ್ರರಂಗದ ವಲಯದಲ್ಲಿ, ಹಾಗು ಚಿತ್ರಪ್ರೇಮಿಗಳಲ್ಲಿ ಬಾಲಣ್ಣ ಎಂದೇ ಪರಿಚಿತರಾಗಿದ್ದ ಇವರಿಗೆ ಹುಟ್ಟಿನಿಂದಲೇ ಕಿವಿಯು ಸರಿಯಾಗಿ ಕೇಳಿಸುತ್ತಿರಲಿಲ್ಲ.

ಹಿನ್ನೆಲೆ :

ಬಾಲಕೃಷ್ಣರ ಜನನ ನವೆಂಬರ್ ೨,೧೯೧೧ ರಂದು ಹಾಸನ ಜಲ್ಲೆಯ ಅರಸೀಕೆರೆಯಲ್ಲಿ ಆಯಿತು. ಇವರ ತಂದೆ ತಾಯಿಯರು ದಿನಗೂಲಿಯಲ್ಲಿ ಜೀವಿಸುತ್ತಿದ್ದರು. ಈ ಶ್ರಮಜೀವಿಗಳಿಗೆ ಒಬ್ಬನೇ ಮಗ ಬಾಲಕೃಷ್ಣ. ಇದ್ದಕ್ಕಿದ್ದಂತೆ ತಂದೆಯು ಕಾಯಿಲೆ ತೀವ್ರ ಸ್ವರೂಪ ಪಡೆದಾಗ ತಾಯಿ ಕಂಡ ಕಂಡಲ್ಲಿ ಬಿಕ್ಷೆ ಬೇಡಿ ಹಣ ಹೊಂದಿಸಲು ಶ್ರಮ ಪಟ್ಟಳು. ಅದೂ ಸಾಲದಾದಾಗ ಬೇರೆ ದಾರಿ ಕಾಣದೆ ಅರಸೀಕೆರೆಯ ಮಂಡಿ ವ್ಯಾಪಾರಿಯ ಉಪ ಪತ್ನಿಗೆ ಮಗು ಬಾಲಕೃಷ್ಣನನ್ನು ಎಂಟು ರೂಪಾಯಿಗೆ ಮಾರಿದಳು. ಆ ಸಾಕು ತಾಯಿ ಬಾಲಕನನ್ನು ಅರಸೀಕೆರೆಯ ಶಾಲೆಗೆ ಸೇರಿಸಿದಳು.

ಆದರೆ ಎಂಟನೆಯ ವಯಸ್ಸಿಗೆ ಬಾಲಣ್ಣನ ಶ್ರವಣಶಕ್ತಿ ಸಂಪೂರ್ಣ ಮಾಯವಾಯಿತು. ಕಲಿಕೆ ಕಷ್ಟವಾಯಿತು. ಲೋಯರ್ ಸೆಕಂಡರಿ ದಾಟುವುದೇ ಕಷ್ಟವಾದಾಗ ಕಲೆಯ ಕಡೆಗೆ ಆಸಕ್ತಿ ಹೊರಳಿತು. ಸ್ನೇಹಿತರ ಜೊತೆಗೂಡಿ ನಾಟಕವಾಡುವ ಹವ್ಯಾಸ ಬಲವಾಯಿತು. ಒಮ್ಮೆ ಸಾಕು ತಂದೆಯ ಜೇಬಿನಿಂದ ದುಡ್ಡು ಕದ್ದು ಸಿಕ್ಕಿ ಬಿದ್ದಾಗ ಸಾಕು ತಾಯಿ ಮನೆಯಿಂದಲೇ ದೂರ ಕಳುಹಿಸಿದಳು.

ಅಲ್ಲಿಗೆ ಇದ್ದ ಮನೆಯ ಋಣ ತೀರಿತು. ಜಗತ್ತೇ ಮನೆಯಾಯಿತು. ನಾಟಕ ಕಂಪೆನಿಯ ಗೇಟು ಕಾಯುವುದು, ಬೋರ್ಡು ಬರೆಯುವುದು, ಪೋಸ್ಟರ್ ಅಂಟಿಸುವುದು...ಹೀಗೆ ಆರಂಭವಾದ ಇವರ ವೃತ್ತಿಜೀವನ ಮುಂದೆ ರಂಗಭೂಮಿಯ ನಟನೆಗೆ ತಿರುಗಿತು. ’ಕೃಷ್ಣಲೀಲಾ ’ ಇವರು ಅಭಿನಯಿಸಿದ ಮೊದಲ ನಾಟಕ. ಚಾಮುಂಡೇಶ್ವರಿ, ಗುಬ್ಬಿ ಕಂಪೆನಿಗಳಲ್ಲಿ ಅಭಿನಯಿಸಿದ್ದ ಬಾಲಣ್ಣ ನೀಲಾಂಜನೆ, ಚಿತ್ರಾಂಗದೆ ಮುಂತಾದ ೫೦ ನಾಟಕಗಳನ್ನು ಬರೆದಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಬಾಲಕೃಷ್ಣ  :

ವರ್ಷ ೧೯೪೩ ರಲ್ಲಿ ರಾಧಾರಮಣ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಇವರು ಸುಮಾರು ೫೧೦ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಸ್ಯ ನಟ, ಖಳ ನಟ, ಪೋಷಕ ನಟ ..- ಹೀಗೆ ಎಲ್ಲ ಬಗೆಯ ಪಾತ್ರಗಳಲ್ಲೂ ನಟಿಸಿ ಸೈ ಅನಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಇವರ ಕೊಡುಗೆ ಚಿರಸ್ಮರಣೀಯ. ಕಣ್ತೆರೆದು ನೋಡು, ಬಂಗಾರದ ಮನುಷ್ಯ, ತ್ರಿಮೂರ್ತಿ, ಸಂಪತ್ತಿಗೆ ಸವಾಲ್, ಗಂಧದ ಗುಡಿ, ಭಾಗ್ಯದ ಲಕ್ಷ್ಮಿ ಬಾರಮ್ಮ ಇವರು ಅಭಿನಯಿಸಿದ ಕೆಲವು ಪ್ರಮುಖ ಚಿತ್ರಗಳು.

ಯಮಕಿಂಕರ ಅವರ ಅಭಿನಯದ ಕೊನೆಯ ಚಿತ್ರ. ಪರ ಭಾಷೆಯ ಸ್ಟುಡಿಯೋದವರು ಕನ್ನಡ ಚಿತ್ರಗಳ ಬಗ್ಗೆ ತೋರಿಸುವ ನಿರ್ಲಕ್ಷ ಅರಿತಿದ್ದ ಬಾಲಣ್ಣ ತಾವೇ ಸ್ವಂತ ಸ್ಟುಡಿಯೋ ನಿರ್ಮಿಸುವ ಸಂಕಲ್ಪ ಮಾಡಿದರು. ಕನ್ನಡಿಗರ ಅಭಿಮಾನದ ಸಾಕಾರವಾಗಲಿ ಎಂದು ಅದಕ್ಕೆ "ಅಭಿಮಾನ್" ಎಂದು ಹೆಸರಿಟ್ಟರು.

ನಿರ್ಮಾಪಕರಾಗಿ ಬಾಲಕೃಷ್ಣ :

ಬಾಲಕೃಷ್ಣ ಅವರು ಕೆಲವು ಚಿತ್ರಗಳಿಗೆ ಸಹನಿರ್ಮಾಪಕರಾಗಿದ್ದರು.

ರಣಧೀರ ಕಂಠೀರವ, ಕಲಿತರೂ ಹೆಣ್ಣೇ, ಪಂಚರತ್ನ, ಭಕ್ತ ಮಲ್ಲಿಕಾರ್ಜುನ ಚಿತ್ರಗಳಿಗೆ ಹಾಡು, ಸಂಭಾಷಣೆ ಬರೆದಿದ್ದರು.

ಪ್ರಶಸ್ತಿ /ಪುರಸ್ಕಾರಗಳು :

೧೯೮೯ -೯೦ - ಪುಟ್ಟಣ್ಣ ಕಣಗಾಲ್ ಪ್ರಶಸ್ತಿ. ಬಂಗಾರದ ಮನುಷ್ಯ ಚಿತ್ರದ ಅಭಿನಯಕ್ಕೆ ಶ್ರೇಷ್ಠ ಪೋಷಕ ನಟ ಪ್ರಶಸ್ತಿ.

ಬಾಲಕೃಷ್ನ ಅವರು ಜುಲೈ ೧೯, ೧೯೯೫ ರಂದು ಕ್ಯಾನ್ಸರ್ ನಿಂದ ನಿಧನರಾದರು.

ಬಾಲ್ಯದಲ್ಲಿಯೇ ಶ್ರವಣ ಶಕ್ತಿ ಸಂಪೂರ್ಣ ಹೋದರೂ ೫೬೧ ಚಿತ್ರಗಳಲ್ಲಿ ಅಭಿನಯಿಸಿದ ಬಾಲಣ್ಣನ ಜನ್ಮ ಶತಮಾನೋತ್ಸವದ (೨೦೧೧) ಸಂದರ್ಭದಲ್ಲಿ ಅವರಿಗೊಂದು "ನಮನ".

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...