Skip to main content

ಪ್ರಕೃತಿ ಮುದ್ರಣದ ಪಿ. ಪುಟ್ಟಯ್ಯ ಶಿವಮೊಗ್ಗ.

ಬಿಳಿ ವಸ್ತ್ರದ ಶುಭ್ರ ಮನಸ್ಸಿನ ಸಮಾಜವಾದಿ ಪುಟ್ಟಯ್ಯ
ಇವರನ್ನು ಸನ್ಮಾನಕ್ಕೆ ಅದಾವ ರೀತಿ ಒಪ್ಪಿಸಿದರೋ ಭಗವಂತನೆ ಬಲ್ಲ.ದಕ್ಷಿಣ ಕನ್ನಡ ಜಿಲ್ಲೆಯ ಪೆರ್ಡೂರಿನಿಂದ ಶಿವಮೊಗ್ಗಕ್ಕೆ ಬಂದವರಿಗೆ ಸಮಾಜವಾದಿ ಚಳುವಳಿ ಕೈಬೀಸಿ ಕರೆಯಿತು. ಡಾ,ಲೋಹಿಯಾರವರ ಆಂಗ್ರೇಜಿ ಹಟಾವೋ ಚಳುವಳಿಯಲ್ಲ ಸಕ್ರಿಯರಾದರು. ಇದಕ್ಕೂ ಮೊದಲು ಮಲ್ಲಾಡಿ ಹಳ್ಳಿಯ ರಾಘವೇಂದ್ರ ಸ್ವಾಮೀಜಿಯವರಿಂದ ಪ್ರೇರೇಪಿತರಾಗಿ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಎಂಬ ಹಳ್ಳಿಯಲ್ಲಿ ಶಾಲೆಯೊಂದನ್ನು ಆರಂಭಿಸಿದರು.ಅಲ್ಲೇ ಹಾಸ್ಟೆಲ್ ಆರಂಭಿಸಿ ಹಿಂದುಳಿದವರ ಮಕ್ಕಳು ಶಾಲೆಗೆ ಬರುವಂತೆ ಮಾಡಿದರು. ಶಿವಮೊಗ್ಗ ಸಿಟಿಯಲ್ಲಿ ಬೆಳಗ್ಗಿನ ನಾಲ್ಕು ಗಂಟೆಗೆ ಬೇರೆ ಬೇರೆ ಊರುಗಳಿಗೆ ಉದಯವಾಣಿ ಪತ್ರಿಕೆಗಳನ್ನು ವಿಂಗಡಿಸುತ್ತಾ ರಾಜಕಾರಣವನ್ನು ಶುದ್ದಗೊಳಿಸುವ ಬಗ್ಗೆ ಯೋಚಿಸತೊಡಗಿದರು.ಇವರು ತೆರೆದಿದ್ದ ಪ್ರಕೃತಿ ಪ್ರಿಂಟರ್ಸ್ ಹಲವು ಚಳುವಳಿಗಳಿಗೆ ಪ್ರೇರಕವಾಯಿತು. ಸಮಾಜವಾದಿ ಚಳುವಳಿಗಾಗಾರರಂತೂ ಇವರ ಪ್ರಿಂಟಿಂಗ್ ಪ್ರೆಸ್ ಗೆ ಬಹು ಹತ್ತಿರ. ಜನತಾದಳ ಅಧಿಕಾರಕ್ಕೆ ಬಂದಾಗ ಬಹಳ ಮಂದಿ ಸಮಾಜವಾದಿಗಳು ಅಧಿಕಾರದ ಸವಿಯುಂಡರು.ಆದರೆ ಪುಟ್ಟಯ್ಯ ಅದರ ಹತ್ತಿರವೂ ಸುಳಿಯಲಿಲ್ಲ.ಜೆ.ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಇವರಿಗೆ ಅಧಿಕಾರದ ರುಚಿಯಡುಗೆ ತಿನ್ನುವ ಬಹಳಷ್ಟು ಅವಕಾಶಗಳಿದ್ದವು. ಎಲ್ಲವನ್ನು ನಿರಾಕರಿಸಿದರು. ಅದಕ್ಕಿಂತ ಮುಖ್ಯುವಾಗಿ ಅದರ ಹತ್ತಿರವೂ ಹೋಗಲಿಲ್ಲ. ಭಾರತ ರತ್ನದಂತಹ ಅತ್ಯುಚ್ಚವಾದ ಪ್ರಶಸ್ತಿಗಳನ್ನು ಸಚಿನ್ ತೆಂಡೂಲ್ಕರ್ ತರದ ಆಟಗಾರರಿಗೆ ಕೊಟ್ಟ ಬಗ್ಗೆ ಇವರಿಗೆ ಖೇದವಿದೆ. ತನ್ನ ದೇಹದಲ್ಲಿ ಉಸಿರನ್ನು ಮಾತ್ರ ಇಟ್ಟಕೊಂಡಿರುವ ಜಾಜ್F ಫರ್ನಾಂಡೀಸ್ ರಂತಹ ಸರಳತೆ ಮತ್ತು ಪ್ರಾಮಾಣಿಕತೆ ಮೈವೆತ್ತಿಕೊಂಡಿದ್ದ , ಮತ್ತು ದೇಶಕ್ಕಾಗಿ ಜೀವ ತೇದಂತವರಿಗೆ ಭಾರತ ರತ್ನ ಹುಡುಕಿಕೊಂಡು ಬಾರದಿರುವ ಬಗ್ಗೆ ಇವರಿಗೆ ಬೇಸರವಿದೆ.ನಿನ್ನೆ ದಿನ ಇವರನ್ನು ಸನ್ಮಾನಿಸಲು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಸ್ವರಾಜ್ ಅಭಿಯಾನ ಸಂಘಟನೆ ಇವರನ್ನು ಒತ್ತಾ ಪೂರ್ವಕವಾಗಿ ಸನ್ಮಾನಿಸಿತು.ಇಡೀ ಶಿವಮೊಗ್ಗದ ಹತ್ತಾರು ಪರಿಶುದ್ದ ಮನಸ್ಸುಗಳಿಗೆ ಖುಷಿಯಾಯಿತು. ಸ್ವರಾಜ್ ಇಂಡಿಯಾ ಕಾರ್ಯಕರ್ತರು ಇವರನ್ನು ಸನ್ಮಾನಕ್ಕೆ ಒಪ್ಪಿಸಿದ್ದಾದರೂ ಹೇಗೆ ಎಂಬ ಪ್ರಶ್ನೆ ಮತ್ತೊಮ್ಮೆ ಹಾಕುತ್ತೇನೆ.ಸನ್ಮಾನಿಸಿದ ದೇವನೂರು ಮಹದೇವರವರಿಗೆ ವಂದನೆಗಳು
ಲೇಖನ :ನೆಂಪೆ ದೇವರಾಜ್ ತೀಥ೯ಹಳ್ಳಿ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...