Skip to main content

#GOA TIMELINE MANJUNATH PUJAR#

#Timeline GOA ಮಂಜುನಾಥ ಪೂಜಾರ್ ಗೋವಾದಲ್ಲಿನ ಮಾಧ್ಯಮ, ರಾಜಕಾರಣ ಮತ್ತು ಪ್ರತಿಷ್ಠಿತ ಉದ್ದಿಮೆದಾರರಲ್ಲಿ ಚಿರಪರಿಚಿತ ಮತ್ತು ಪ್ರಸಿದ್ದರು#
 ಇವರು ಮೊದಲು ಗೋವಾದ ಹೆರಾಲ್ಡ್ ಗ್ರೂಪ್ ನ ಜನರಲ್ ಮ್ಯಾನೇಜರ್ ಆಗಿದ್ದವರು, ಅದರ ಟಿವಿ ಚಾನಲ್ ಮತ್ತು ಮರಾಠಿ ಆವೃತ್ತಿ ಪ್ರಾರಂಬಿಸಿದವರು ಇವರೆ.
  ಈಗ ಗೋವಾ ರಾಜಧಾನಿ ಪಣಜಿಯಲ್ಲಿ Timeline Goa Media house ಎಂಬ ಬೃಹತ್ ಜಾಹಿರಾತು ಸಂಸ್ಥೆ ನಡೆಸುತ್ತಿದ್ದಾರೆ  ದೇಶದ ಪ್ರತಿಷ್ಟಿತ ಉತ್ಪನ್ನಗಳು ತಮ್ಮ ಮಾರುಕಟ್ಟೆಗೆ ಉತ್ಪನ್ನಗಳನ್ನ ಬಿಡುಗಡೆ ಮಾಡಲು ಇವರ ಸಹಾಯ ಪಡೆಯುತ್ತದೆ.
   ಇವರ Timeline Goa ಎಂಬ ಲೈಪ್ & ಸ್ಟೈಲ್ ಮ್ಯಾಗಜಿನ್ ಮಾಸಿಕ ಪತ್ರಿಕೆ ಗೋವಾದಲ್ಲಿ ಪ್ರಸಿದ್ದ ಪತ್ರಿಕೆ ಆಗಿದೆ.
  ಇವರು ಓದಿದ್ದು ಆನಂದಪುರಂ ನ ಸಕಾ೯ರಿ ಕನ್ನಡ ಶಾಲೆಯಲ್ಲಿ, ಬಿ ಆರ್ ಪಿಯಲ್ಲಿ ಎಂ.ಎ.ಓದಿದವರು ನಂತರ ಬೆಂಗಳೂರಿನಲ್ಲಿ ಉದ್ಯೋಗ ಮಾಡಿದರು ನಂತರ ಗೋವಾದಲ್ಲಿ ಸೆಟಲ್ ಆಗಿದ್ದಾರೆ.
  ಇವರ ಸಾದನೆ ಅತ್ಯಂತ ದೊಡ್ಡದು, ಯಾರ ಸಹಾಯವೂ ಇಲ್ಲದೆ ಗಾಡ್ ಪಾದರ್ ಇಲ್ಲದೆ ಇಷ್ಟು ಉನ್ನತ ಸ್ಥಾನಕ್ಕೆ ಬೇರೆ ರಾಜ್ಯದಲ್ಲಿ ಸೆಟಲ್ ಆಗುವುದು ಸಣ್ಣ ವಿಷಯವಲ್ಲ!
  ಮಂಜು ಮತ್ತು ನಾನು ಆನಂದಪುರಂ ನ ಸಕಾ೯ರಿ ಕನ್ನಡ ಶಾಲೆಯಲ್ಲಿ ಒಂದನೇ ತರಗತಿಯಿಂದ 7 ನೇ ತರಗತಿವರೆಗೆ ಅಕ್ಕಪಕ್ಕದಲ್ಲೇ ಕುಳಿತು ಓದಿದವರು 7 ನೇ ತರಗತಿಯಲ್ಲಿ ಇಬ್ಬರು 400ಕ್ಕಿ೦ತ ಹೆಚ್ಚು ಅಂಕ ಪಡೆದವರು ನಿನ್ನೆ ಪಣಜಿಯ ಮಂಜು ಕಚೇರಿಯಲ್ಲಿ ಈ ಎಲ್ಲಾ ಬಾಲ್ಯದ ನೆನಪು ಮಾಡಿಕೊಂಡೆವು, ನನ್ನ ಮಗಳ ವಿವಾಹ ಆಮಂತ್ರಣ ನೀಡಲು ಹೋಗಿದ್ದೆ.

*Timeline Goa Manjunath Poojar - Well known among Goa's media, politics, and reputed industrialists.*
 Manjunath Poojar a is an alumnus of Government Kannada Primary School of Anandapuram. I and Manjunath were classmates in this school from 1st Standard to 7th standard. We both sat together,  studied in Kannada medium itself. We both scored more than 400 marks in 7th standard's public exams.

Later he pursued his M.A from Kuvempu University. He worked in Bangalore for some time. Later it was Goa where he started his business. 
Initially he was the General Manager of  Goa Herald Group. He is the one who started its TV channel and Marathi version of the Goa Herald.
Currently he is running an ad firm named _Timeline Goa Media House_ Many reputed comanies hire his firm's services for marketing  their new products. His Timeline Goa is a famous lifestyle magazine in Goa. 
He is a successful businessman in Goa. His success comes from his hard work and passion.  To reach such heights in another state without any God father, is not a small achievement.

TIMELINE MEDIA PRIVATE LIMITED
14/421 1ST FLOOR 
OPPOSITE HOTEL BLUE BAY
DR. JACK SEQUEIRA ROAD
MIRAMAR -DONAPAULA ROAD
CARANZALEM -POST
TISWADI- TALUK
NORTH GOA- DISTRICT
GOA  PINCODE : 403002
PHONE : 0832-6743333
CELL : 9822130034

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ