Skip to main content

ಸಿನಿಮಾ ಸ್ಟಾರ್ ಶೈಲಿಯ ನಿಗೂಡ ಭೂಗತ ಜಗತ್ತಿನ ಡಾನ್ ಮುತ್ತಪ್ಪ ರೈ ಕ್ಯಾನ್ಸರ್ ನಿ೦ದ ಇಹಲೋಕ ಯಾತ್ರೆ ಮುಗಿಸಿದ್ದಾರೆ

ಕೊರಾನಾ ಲಾಕ್ ಡೌನ್ ಡೈರಿ -2020
              ಲೆಟರ್ ನಂಬರ್- 34
           ದಿನಾ೦ಕ: 16 -ಮೇ -2020

#ಕೊರಾನಾ ಲಾಕ್ ಡೌನ್  ಸoದಭ೯ದಲ್ಲಿ ಇಹಲೋಕ ತ್ಯಜಿಸಿದ ಡಾನ್ 
        ಮುತ್ತಪ್ಪ ರೈ
 
     ಮುತ್ತಪ್ಪ ರೈ ಬಗ್ಗೆ ಅವರ ಕರಾಳ ಕ್ರೈಮ್ ಲೋಕದ ಬಗ್ಗೆ ದೊಡ್ಡ ಇತಿಹಾಸವೇ ಇದೆ.
    ದೇಶ ಬಿಟ್ಟು ಹೋಗಿ ಪುನಃ ದೇಶದ ಕಾನೂನಿಗೆ ತಲೆಬಾಗಿ ಜೈಲು ಸೇರಿ ಎಲ್ಲಾ ಕೇಸ್ ಗೆದ್ದು ಗೌರವಾನ್ವಿತ ಜೀವನದ ವಾಹಿನಿಗೆ ಬಂದರು.
    ಇವರಿಗೆ ನಮ್ಮ ದೇಶದ ಗೂಡಚಾರ ಸಂಸ್ಥೆ "ರಾ" ಸಹಾಯ ಮಾಡದಿದ್ದರೆ ಇದು ಸಾಧ್ಯವಿಲ್ಲ ಎಂಬ ವಿಚಾರ ಕೂಡ ಇದೆ.
    ಕೇರಳ ಗಡಿ ಸಮೀಪದ ಸಣ್ಣ ಹಳ್ಳಿಯಿ೦ದ ಬೆಂಗಳೂರು ಪಾತಕ ಲೋಕ ಆಳುವವಂತಾದ ಬ್ಯಾಂಕ್ ಒಂದರ ಸಣ್ಣ ನೌಕರನ ಜೀವನ ವೃತ್ತಾಂತ ಕೂತೂಹಲಭರಿತ ಕಥೆ ಆಗಿದೆ.
   ನಾಟಿ ಕೋಳಿ ನೀರು ದೊಸೆ, ನಾಗಮಂಡಲ, ಕೋಲಾ, ಕಂಬಳಗಳು, ಹುಟ್ಟೂರಿನ ರಥ ಜಾತ್ರೆ ಹೀಗೆ ತಮ್ಮ ಮೂಲ ರುಚಿ, ಪೂಜೆ, ಆಚರಣೆಗಳನ್ನ ತಪ್ಪದೇ ಪಾಲಿಸುತ್ತಿದ್ದರಂತೆ.
   ಕನಾ೯ಟಕದಲ್ಲಿ ಜನ ಸಂಘಟನೆ ಒಂದನ್ನ ಹುಟ್ಟುಹಾಕಿದ್ದಾರೆ ಕೂಡ.
  ಕೊರಾನದ ಈ ಕೆಡು ಕಾಲದಲ್ಲಿ ಈಹ ಲೋಕ ತ್ಯಜಿಸಿದ್ದರಿಂದ ರೈ ಅಂತ್ಯ ಕ್ರಿಯೆ ಸರಳವಾಗಿ ಆಯಿತು ಇಲ್ಲದಿದ್ದರೆ ಯಾವ ಸೆಲಬ್ರಿಟಿಗೂ ಕಡಿಮೆ ಇಲ್ಲದ೦ತೆ ನಡೆಯುತ್ತಿತ್ತು.
   ಇವರ ಅಜನ್ಮ ಶತೃ ಆಗಿದ್ದ ಒಂದು ಕಾಲದ ಇವರ ಗೆಳೆಯ ಅಗ್ನಿ ಶ್ರೀದರ್ ನಿನ್ನೆ ಟಿವಿ ಸಂದಶ೯ನದಲ್ಲಿ ಹೇಳಿದ ಮಾತು " ಎಲ್ಲಾ ಡಾನ್ ಗಳ ಸಾವು ದುರಂತದಲ್ಲಿ ಆದರೆ ಮುತ್ತಪ್ಪ ರೈ ಸಾವು ಮಾತ್ರ ಸಹಜ ಸಾವಾಗಿದೆ" ಅಂತ.
   ಮುತ್ತಪ್ಪ ರೈ ವೇಷ ಭೂಷಣ, ಪ್ರೆ೦ಚ್ ಗಡ್ಡ, ವಿದೇಶಿ ಕನ್ನಡಕ ಮತ್ತು ದುಬಾರಿ ಕಾರಿನಲ್ಲಿ ಅಂಗರಕ್ಷರ ಪಡೆಯ ಮದ್ಯ ಯಾವಾಗಲೂ ಇರುತ್ತಿದ್ದ ಚಿತ್ರ ನೋಡಿ ಇವರ ಜೀವನದ ಬಗ್ಗೆ ಎಲ್ಲರಿಗೂ ಒಂದು ನಿಗೂಡ ಕುತೂಹಲ ಇದ್ದಿತ್ತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...