Skip to main content

ಮುಡೇ೯ಶ್ವರ ವಿಶ್ವ ವಿಖ್ಯಾತಿ ಆಗಲು ಡಾ.ಆರ್. ಎನ್.ಶೆಟ್ಟರ ಶ್ರಮವಿದೆ, ಅವರ ಜೀವನ ಕೂಡ, 92ನೇ ವಯಸ್ಸಿನಲ್ಲಿ ಇಹಲೋಕ ಯಾತ್ರೆ ತ್ಯಜಿಸಿದ್ದಾರೆDr

#ಮುಡೇ೯ಶ್ವರ_ವಿಶ್ವವಿಖ್ಯಾತಗೊಳಿಸಿದ_ರಾಮನಾಗಪ್ಪ_ಶೆಟ್ಟರು.

   ಆರ್.ಎನ್. ಶೆಟ್ಟರೆಂದರೆ ಅಂದರೆ ಅವರ ನಿಮಾ೯ಣ ಸಂಸ್ಥೆಯಿಂದ ಆಗದ ಕೆಲಸವೇ ಇಲ್ಲ ಎ೦ಬ ಪ್ರತೀತಿ ಇದೆ ಇದಕ್ಕೆ ಕಾರಣ ಇವರ ಸಂಸ್ಥೆ ಸವಾಲಾಗಿ ನಿಮಿ೯ಸಿರುವ ಕೊಂಕಣ ರೈಲ್ವೆಯ 18 ಸುರಂಗ ಮಾಗ೯ಗಳು, ಯುಕೆಪಿಯ ನೂರಾರು ಕಿ.ಮೀ. ಉದ್ದದ ನೀರಾವರಿ ಕಾಲುವೆಗಳು, ಬೆಳಗಾಂ ಜಿಲ್ಲೆಯ ಹಿಡಕಲ್ ಆಣೆಕಟ್ಟುಗಳು ಎದ್ದು ಕಾಣುತ್ತದೆ.
 ಇವರ ತಂದೆ ಕೃಷಿಕರು, ಪುರಾಣ ಪ್ರಸಿದ್ದ ಭಟ್ಕಳ ತಾಲ್ಲೂಕಿನ ಮುಡೇ೯ಶ್ವರ ದೇವಾಲಯದ ಮುಕ್ತೇಸರರಾಗಿದ್ದರು, ಗೋಕಣ೯ದಲ್ಲಿ ಆತ್ಮಲಿಂಗ ಐಕ್ಯ ಆದಾಗ ರಾವಣ ಅದನ್ನು ಕೀಳುವ ಪ್ರಯತ್ನದಲ್ಲಿ ಆತ್ಮಲಿಂಗದ ಕೆಲ ತುಣುಕು ಇಲ್ಲಿಗೆ ಬಂದು ಬಿದ್ದಿದೆ ಎಂಬ ಪ್ರತೀತಿ, ಸ್ಥಳ ಪುರಾಣ ಇದೆ.
  ಈಗಲೂ ಮುಡೇ೯ಶ್ವರದಲ್ಲಿ ದೇವರ ಎದುರು ಗೋಕಣ೯ದ ಆತ್ಮಲಿಂಗದ ಕಲ್ಲುಗಳ ತುಣುಕ ಅಪೇಕ್ಷೆ ಪಟ್ಟರೆ ಅಚ೯ಕರು ತೋರಿಸುತ್ತಾರೆ.
   ಇಲ್ಲಿ ಜನಿಸಿ ಬಾಲ್ಯ ಕಳೆದ ಶೆಟ್ಟರು ಪ್ರಾಥಮಿಕ ಶಿಕ್ಷಣ ಮಾತ್ರ ಪಡೆದರೂ ಅವರ ಸಾಧನೆಗಾಗಿ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪಡೆಯುವಂತಾಗಿದ್ದು ಇತಿಹಾಸ.
  1961 ರಲ್ಲಿ ಇವರು ಸ್ಥಾಪಿಸಿದ ನಿಮಾ೯ಣ ಸಂಸ್ಥೆ ಇವತ್ತು ಇವರ ಒಟ್ಟು ಆಸ್ತಿ ಮೌಲ್ಯ 18 ಸಾವಿರದ 700 ಕೋಟಿ ಅಂದರೆ ಸಣ್ಣದಲ್ಲ ಇದರ ಜೊತೆ ಶೈಕ್ಷಣಿಕ ಕ್ಷೇತ್ರ, ಹೋಟೆಲ್ ಉದ್ಯಮ, ಮಂಗಳೂರು ಹೆಂಚು, ವೆಟ್ರಿಪೈಡ್ ಟೈಲ್ಸ್, ದೇಶದ ನಂಬರ್ 1 ಮಾರುತಿ ಶೋ ರೂಂ, ಹೋಟೆಲ್ ರೆಸಾಟ್೯ಗಳು ಹೀಗೆ ನೂರಾರು ಕ್ಷೇತ್ರದಲ್ಲಿ ಇವರು ತೊಡಗಿಸಿ ಕೊಂಡಿದ್ದಾರೆ.
  ತಂದೆ ಮುಕ್ತೇಸರರಾಗಿದ್ದ ಮುರ್ಡೇಶ್ವರ ದೇವಾಲಯ ಪುನರ್ನಿಮಾ೯ಣ ಮಾಡಿ 249 ಅಡಿ ಎತ್ತರದ ರಾಜ ಗೋಪುರ ನಿಮಿ೯ಸಿದ್ದು ಮತ್ತು 123 ಅಡಿ ಎತ್ತರದ ದ್ಯಾನಸ್ಥಿತಿಯ ಈಶ್ವರ ಮೂತಿ೯ ನಿಮಿ೯ಸಿ ಇಡೀ ದೇಶದ ಪ್ರವಾಸೋದ್ಯಮ ಸ್ಥಳಗಳಲ್ಲಿ ಮುಡೇ೯ಶ್ವರಕ್ಕೆ ದೊಡ್ಡ ಪ್ರಾತಿನಿದ್ಯ ದೊರಕಿಸಿ ಕೊಟ್ಟ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುಡೇ೯ಶ್ವರ ಮೂಲದ ಕನ್ನಡಿಗ ಡಾಕ್ಟರ್ ಆರ್.ಎನ್.ಶೆಟ್ಟರ ಸಾಧನೆ ಅಸಾದ್ಯವೇ ಸರಿ.
  ಇವತ್ತು ತಮ್ಮ 92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ ಇವರ ಆತ್ಮಕ್ಕೆ ಸದ್ಗತಿ ಸ್ವಗ೯ ಪ್ರಾಪ್ತಿಗೆ ಪ್ರಾಥಿ೯ಸೋಣ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...