Skip to main content

ಬೆಸ್ತರ ರಾಣಿ ಚಂಪಕಾ ಎಂಬ ನನ್ನ ಕಾದಂಬರಿ ರಂಗೋಲಿ ಪ್ರವೀಣೆ ಚಂಪಕ ಮತ್ತು ಕೆಳದಿ ರಾಜ ವೆಂಕಟಪ್ಪ ನಾಯಕರ ದುರಂತ ಪ್ರೇಮ ಕಥೆ ಈ ಕಾದಂಬರಿಯಲ್ಲಿನ ಒಂದು ಅದ್ಯಾಯ ರಂಗೋಲಿ ಬಗ್ಗೆ

#ರOಗೋಲಿ ಏನಿದರ ಮಹತ್ವ?#
 ನಾನು ಬರೆದಿರುವ ಬೆಸ್ತರ ರಾಣಿ ಚಂಪಕಾ ಪುಸ್ತಕದಲ್ಲಿ ಚಂಪಕಾ ರಂಗೋಲಿ ಪ್ರವೀಣೆ, ರಾಜ ವೆಂಕಟಪ್ಪ ನಾಯಕರು ಅವಳು ಬಿಡಿಸುವ ರಂಗೋಲಿ ನೋಡಿಯೇ ಅವಳ ಮೇಲೆ ವ್ಯಾಮೋಹಗೊ೦ಡು ವಿವಾಹ ಆಗುತ್ತಾರೆ.
  ಈ ಕಾದಂಬರಿಯಲ್ಲಿ ರಂಗೋಲಿಯ ಬಗ್ಗೆ ಒಂದು ಅಧ್ಯಾಯದಲ್ಲಿ .....
  "ಚಂಪಕಾಳ ರಂಗೋಲಿಯಲ್ಲಿ ಅದೆಂತಹ ಆಕಷ೯ಣೆ ಇದೆ"
 ರಂಗೋಲಿಯ ಬಗ್ಗೆ ಆಸ್ಥಾನದ ಪಂಡಿತರ ಹತ್ತಿರ ಒಮ್ಮೆ ಚಚಿ೯ಸಿದಾಗ ಅವರು ಹೇಳಿದ್ದು ಅರುಣೋದಯದಲ್ಲಿ ಲಲನೆಯರು ತಮ್ಮ ಮನೆಯಂಗಳದಲ್ಲಿ ವಿವಿದ ರೀತಿಯ ರಂಗೋಲಿಯನ್ನ ರಚಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಾಚೀನ ಸಂಪ್ರದಾಯವಾಗಿದೆ.ರಂಗೋಲಿಯು ಶಿಲ್ಪ ಕಲೆಗೂ ಆದಾರವಾಗಿತ್ತೆ೦ದು ತಿಳಿದು ಬಂದಿದೆ, ದೇವಾಲಯಗಳಲ್ಲಿ ದಾಮಿ೯ಕ ವಿಧಿ ವಿಧಾನಗಳಲ್ಲಿ ರಂಗೋಲಿ ಬಿಡಿಸುತ್ತಾರೆ.ಇದರಲ್ಲಿ ನಾನಾ ರೀತಿಯ ಕೋನಗಳು, ಆಕೃತಿಗಳು, ಆಯತಗಳು, ಮಂಡಲಗಳು ಇದೆ. ಸಮೂಹ ಚುಕ್ಕಿಗಳನ್ನ ಹಾಕಿ ಅದಕ್ಕೆ ರೇಖೆಗಳನ್ನ ಕೂಡಿಸಿ ಪ್ರಮಾಣಬದ್ಧವಾದ ರಂಗೋಲಿ ಹಾಕಿದರೆ ಮಾತ್ರ ರಂಗೋಲಿ ಸುಂದರವಾಗುತ್ತದೆ. ರಂಗೋಲಿಯಲ್ಲಿ ಆಧಿಕೃತ ಅಳತೆಗಳಿದೆ, ಈ ಕಲೆಯ ಪ್ರಾಚೀನತೆ ನಿಖರವಾಗಿ ತಿಳಿದಿಲ್ಲ, ವಿನ್ಯಾಸಗಳಂತೂ ಲೆಖ್ಖಕ್ಕೆ ಸಿಗುವುದಿಲ್ಲ.
  ರಂಗೋಲಿಯು ದೇವರನ್ನ ಒಲಿಸಿಕೊಳ್ಳುವ ಒಂದು ಆರಾದನಾ ಸಂಪ್ರದಾಯವೂ ಆಗಿದೆ, ಬಣ್ಣ ಬಣ್ಣದ ಹಿಟ್ಟುಗಳಿ೦ದ, ಕಲ್ಲಿನ ಪುಡಿಗಳಿಂದ ರಂಗೋಲಿಯನ್ನ ರಂಗು ರOಗಾಗಿಸುವ ಕಲೆ ಹೆಣ್ಣು ಮಕ್ಕಳು ಕಲಿತಿದ್ದಾರೆ, ಇದಕ್ಕೆ ಗೋದಿ, ಜವೆಗೋದಿ, ಅಕ್ಕಿ ಹಿಟ್ಟು, ಕುಂಕುಮ, ಅರಿಶಿಣ ಪುಡಿ, ಶಿಲಾ ಚುಣಾ೯ ಮತ್ತು ನವರತ್ನಪುಡಿಯನ್ನ ತುಂಬಿಸುವುದು ಒಂದು ಕಲೆ. ಹೋಮ ಹವನದಲ್ಲಿ ಮದುವೆಯ ಹಸೆಮಣೆಯಲ್ಲಿ ದೇವರ ಮಂಟಪಗಳಲ್ಲಿ ಪುರೋಹಿತರು ರಂಗೋಲಿ ಬಿಡಿಸುತ್ತಾರೆ, ತಾಂತ್ರಿಕ ಪೂಜೆಯಲ್ಲಿ ಮಂಡಲಗಳನ್ನು ರಂಗೋಲಿಯಲ್ಲೇ ಬಿಡಿಸಲೇ ಬೇಕು. ಎಲ್ಲರೂ ರಂಗೋಲಿಯಲ್ಲಿ ಪರಿಣಿತರಾಗಲು ಸಾಧ್ಯವಿಲ್ಲ. ರಂಗೋಲಿ ಬಿಡಿಸುವುದರಲ್ಲಿ ತಾಳ್ಮೆ ಇರಬೇಕು, ದೂರಾಲೋಚನೆ ಇರಬೇಕು, ಕಲ್ಪನೆ ಇರಬೇಕು, ಚುರುಕುತನ ಇರಬೇಕು ಹಾಗಿದ್ದರೆ ಮಾತ್ರ ಜನಾಕಷ೯ಕ ರಂಗೋಲಿ ರಚಿಸಲು ಸಾಧ್ಯ.ಹುಟ್ಟಿನಿಂದಲೇ ಈ ಚಾಕಚಕ್ಯತೆಯನ್ನ ಕೆಲವರು ತನ್ನ ಹಿಂದಿನ ಜನ್ಮದ ಫಲವಾಗಿ ಪಡೆದಿರುತ್ತಾರೆ.
  ನಿದಿ೯ಷ್ಟವಾದ ಆಳತೆಯ ಸ್ಪಷ್ಟವಾದ ಗೆರೆಗಳು ಹೊಂದಿರುವ ರಂಗೋಲಿಗೆ ಸೂಕ್ತ ಬಣ್ಣ ತುಂಬುವುದು ಕಲಾಕಾರಿಕೆ, ತಂತ್ರ ವಿದ್ಯೆಯಲ್ಲಿ ಇಂತಹ ರಂಗೋಲಿಗಳು ಸಾಧಕರ ಮನೋಸ್ಥಿಮಿತ ಉ೦ಟು ಮಾಡುತ್ತದೆ, ಅವರನ್ನ ಸಮಾದಿ ಸ್ಥಿತಿಗೂ ಒಯ್ಯುತ್ತದೆ, ತಂತ್ರ ವಿದ್ಯೆಯಿಂದ ಸಾದನೆ ಮಾಡಬೇಕಾದರೆ ಮಂಡಲಗಳು, ರಂಗೋಲಿಗಳು ಬಹುಮುಖ್ಯ.
  ಸುOದರವಾದ ಸಮಯೋಚಿತವಾದ ರಂಗೋಲಿಯಿಂದ ದೇವರು ಒಲಿಯಲೇ ಬೇಕು ಹಾಗಾಗಿ ರಂಗೋಲಿ ಎಂದರೆ ಅದು ಸಣ್ಣ ಚಿತ್ರವಲ್ಲ ಎಂತಹದೊ ಒಂದು ರೇಖೆಯಲ್ಲ ಯಾವುದೋ ಒಂದು ಪುಡಿಯಲ್ಲ ಇದಕ್ಕೆ ಪ್ರಾಚಿನತೆ ಸ್ಪಶ೯ವಿದೆ, ದೈವ ಶಕ್ತಿಯ ಬಲವಿದೆ, ತಂತ್ರ ವಿದ್ಯೆಯ ಒಲವಿದೆ, ಸಂಸ್ಕೃತಿಯ ಹಿನ್ನೆಲೆಯಿದೆ, ದಾಮಿ೯ಕ ಭಾವನೆಯ ಸೆಳಕಿದೆ, ಸೌ೦ದಯ೯ದ ತಳುಕಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
  ಹಾಗಾಗಿ ಸುಂದರವಾದ ರಂಗೋಲಿ ಬಿಡಿಸುವ ಚಂಪಕಾಳ ಮೇಲೆ ರಾಜರ ವ್ಯಾಮೋಹವೂ ಇಮ್ಮಡಿಯಾಯಿತು, ಚಂಪಕಾ ನನ್ನವಳಾಗಿರಬೇಕು ಎಂಬ ಭಾವನೆ ರಾಜರಲ್ಲಿ ಉ೦ಟಾಯಿತು.
 ಹಾಗಾಗಿ ಚಂಪಕಾಳ ಬೇಟಿ ಮಾಡುವ ಗುರು ಪೂಣಿ೯ಮೆ ಎ೦ಬ ಪವಿತ್ರ ದಿನಕ್ಕಾಗಿ ರಾಜರು ಚಡಪಡಿಸಲು ಶುರು ಮಾಡಿದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

ಶ್ರೀಧರ ಸ್ವಾಮಿ ವರದಳ್ಳಿ ಪವಾಡ ಪುರುಷರು.

   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವರದಳ್ಳಿಯ ತಪಸ್ವಿ ಶ್ರೀಧರ ಸ್ವಾಮಿಗಳು.   ವರದಳ್ಳಿ ಶ್ರೀಧರ ಸ್ವಾಮಿಗಳ ಬಗ್ಗೆ ಕೇಳಿದ್ದು, ಓದಿದ್ದು ಮತ್ತು ಅವರ ಒಡನಾಡಿಗಳನ್ನ ಭೇಟಿ ಮಾಡಿದ್ದು ಬಿಟ್ಟರೆ ಅವರನ್ನ ಪ್ರತ್ಯಕ್ಷವಾಗಿ ನೋಡಿಲ್ಲ.     ನಾವು ಚಿಕ್ಕವರಿದ್ದಾಗ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ಆಗಿನ ಕಾಲದ ಖ್ಯಾತ ಚಲನಚಿತ್ರ ನಟ ಉದಯ ಕುಮಾರ್ ಅರಳಿ ಮರದ ಗ್ಯಾರೇಜ್ ಹತ್ತಿರ ಬಂದಿದ್ದಾರೆ ಅಂತ ಊರಿನ ಜನರೆಲ್ಲ ಗುಂಪು ಗುಂಪಾಗಿ ಓಡುತ್ತಿದ್ದರು, ನಾವು ಚಿಕ್ಕ ಮಕ್ಕಳೆಲ್ಲ ಅವರನ್ನ ಹಿಂಬಾಲಿಸಿದೆವು.       ಅಲ್ಲಿ ಒಂದು ಬಿಳಿ ಅಂಬಾಸಡರ್ ಕಾರು ನಿಂತಿದ್ದು ಅದರ ಅಡಿಯಲ್ಲಿ ಮಲಗಿ ಮೆಕ್ಯಾನಿಕ್ ದುರಸ್ತಿ ಮಾಡುತ್ತಿದ್ದರೆ ಎತ್ತರದ ಮಣ್ಣು ದಿಬ್ಬದ ಮೇಲೆ ನಮ್ಮ ನಟ ಉದಯ ಕುಮಾರ್ ಸಿಗರೇಟು ಸೇದಿ ಹೊಗೆ ಬಿಡುತ್ತಿದ್ದರು. ಯಾರೂ ಅವರ ಹತ್ತಿರ ಮಾತಾಡುವ ದೈಯ೯ ವಹಿಸಲಿಲ್ಲ ಆದರೆ ನೆರೆದ ಜನ ಮಾತಾಡಿಕೊಳ್ಳುತ್ತಿದ್ದ ಮಾತಿನ ಸಾರಾಂಶವೆಂದರೆ ವರದಳ್ಳಿಯಲ್ಲಿ ತಪಸ್ಸು ಮಾಡುತ್ತಿದ್ದ ಶ್ರೀಧರ ಸ್ವಾಮಿಗಳು ದೇಹತ್ಯಾಗ ಮಾಡಿದ್ದಾರೆ ಅದನ್ನ ಕೇಳಿ ಅವರ ಭಕ್ತ ಮತ್ತು ಶಿಷ್ಯರಾದ ಖ್ಯಾತ ಚಿತ್ರ ನಟ ಉದಯ ಕುಮಾರ್ ಬರುವಾಗ ಕಾರು ಹಾಳಾಗಿ ದುರಸ್ತಿಗಾಗಿ ನಿಂತಿದ್ದಾರೆ, ದುಃಖದಲ್ಲಿ ಇರೋದರಿಂದ ಆ ರೀತಿ ಸಿಗರೇಟು ಸೇದಿ ಬೂದಿ ಮಾಡುತ್ತಿದ್ದಾರೆ ಅವರ ಹತ್ತಿರ ಯಾರೂ ಮಾತಾಡ ಬೇಡಿ ಅಂತ ...