Skip to main content

Blog number 1139. ಆನಂದಪುರಂ ಶ್ರೀ ವರಸಿದ್ದಿ ವಿನಾಯಕ ಸ್ವಾಮಿ ದೇವಾಲಯದ ರಥೋತ್ಸವ 25 -ಜನವರಿ -2023 ಬುಧವಾರ ನಡೆಯಲಿದೆ, ಈ ಬಾರಿಯ ವಿಶೇಷ ವಿಶ್ವವ್ಯಾಪಿ ಗಣಪತಿ ಪ್ರದರ್ಶನದ ಖ್ಯಾತ ಕಲಾವಿದ ಗೋವರ್ದನ ಅಂಕೋಲೆಕರ್ ಅವರಿಂದ ದೃಷ್ಟಿ ಗಣಪತಿ ರಂಗೋಲೆ ಪ್ರದರ್ಶನ.

https://youtu.be/_pM0rJxk-qw

#ದೃಷ್ಟಿ_ಗಣಪತಿ_ರಂಗೋಲೆ

#ನಮ್ಮೂರ_ಶ್ರೀವರಸಿದ್ಧಿ_ವಿನಾಯಕ_ಸ್ವಾಮಿ_ದೇವಾಲಯದ_ರಥೋತ್ಸವದಲ್ಲಿ

#ವಿಶ್ವವ್ಯಾಪಿ_ಗಣಪತಿ_ಪ್ರಸಿದ್ದಿಯ_ಗೋವರ್ದನ_ಅಂಕೋಲೆಕರ್_ಅವರಿಂದ.

#ದೃಷ್ಟಿ_ಗಣಪತಿ_ಆರಾದನೆಯ_ಒಳಿತುಗಳು .

#ದಿನಾಂಕ_25_ಜನವರಿ_2023_ಬುದವಾರ_ರಥೋತ್ಸವ.

    ನಮ್ಮ ಊರಿನ ಶ್ರೀವರ ಸಿದ್ಧಿವಿನಾಯಕ ಸ್ವಾಮಿ ದೇವಾಲಯದ 17ನೇ ವಷ೯ದ ಬ್ರಹ್ಮ ರಥೋತ್ಸವ ಮುಂದಿನ ತಿಂಗಳು ಅಂದರೆ ದಿನಾಂಕ 25- ಜನವರಿ -2023ರ ಬುಧವಾರ ನಡೆಯಲಿದೆ.
   ಈ ಸಾರಿಯ ವಿಶೇಷ ಅಂದರೆ ವಿಶ್ವವ್ಯಾಪಿ ಗಣೇಶ ಪ್ರದರ್ಶನದ ಪ್ರಖ್ಯಾತಿ ಪಡೆದ ಗೋವರ್ದನ ಅಂಕೋಲೆಕರ್ ಅವರಿಂದ ದೇವಾಲಯದಲ್ಲಿ #ದೃಷ್ಟಿ_ಗಣಪತಿ_ರಂಗೋಲಿ_ಪ್ರದರ್ಶನ ಏರ್ಪಡಿಸಲಾಗಿದೆ.
   ದೃಷ್ಟಿಗಣಪತಿಯ ವಿಶೇಷ ಏನು? ಈ ಬಗ್ಗೆ ಸ್ವತಃ ಗೋವರ್ದನ ಅಂಕೋಲೆಕರ್ ವಿವರಿಸಿದ್ದಾರೆ, ದೃಷ್ಟಿ ಗಣಪತಿ ರಂಗೋಲಿಯನ್ನು ದರ್ಶನ ಮಾಡಿ ಪ್ರದಕ್ಷಿಣೆ ಮಾಡಿ ನಮಿಸಿದರೆ ದೃಷ್ಟಿ ದೋಷ, ಗೃಹ ದೋಷ ಮತ್ತು ವಾಸ್ತು ದೋಷ ಪರಿಹಾರ ಆಗುತ್ತದೆ೦ದು ಆಸ್ತಿಕ ವರ್ಗದಲ್ಲಿ ಇರುವ ನಂಬಿಕೆ.
  ದೃಷ್ಟಿಗಣಪತಿಯ ರಂಗೋಲಿ ಹಾಕಲು ಸ್ಥಳಿಯ ಮಹಿಳೆಯರಿಗೆ ತರಬೇತಿ ನೀಡುತ್ತಿದ್ದಾರೆ ಗೋವರ್ದನ ಅಂಕೋಲೆಕರ್.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

ಶ್ರೀಧರ ಸ್ವಾಮಿ ವರದಳ್ಳಿ ಪವಾಡ ಪುರುಷರು.

   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವರದಳ್ಳಿಯ ತಪಸ್ವಿ ಶ್ರೀಧರ ಸ್ವಾಮಿಗಳು.   ವರದಳ್ಳಿ ಶ್ರೀಧರ ಸ್ವಾಮಿಗಳ ಬಗ್ಗೆ ಕೇಳಿದ್ದು, ಓದಿದ್ದು ಮತ್ತು ಅವರ ಒಡನಾಡಿಗಳನ್ನ ಭೇಟಿ ಮಾಡಿದ್ದು ಬಿಟ್ಟರೆ ಅವರನ್ನ ಪ್ರತ್ಯಕ್ಷವಾಗಿ ನೋಡಿಲ್ಲ.     ನಾವು ಚಿಕ್ಕವರಿದ್ದಾಗ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ಆಗಿನ ಕಾಲದ ಖ್ಯಾತ ಚಲನಚಿತ್ರ ನಟ ಉದಯ ಕುಮಾರ್ ಅರಳಿ ಮರದ ಗ್ಯಾರೇಜ್ ಹತ್ತಿರ ಬಂದಿದ್ದಾರೆ ಅಂತ ಊರಿನ ಜನರೆಲ್ಲ ಗುಂಪು ಗುಂಪಾಗಿ ಓಡುತ್ತಿದ್ದರು, ನಾವು ಚಿಕ್ಕ ಮಕ್ಕಳೆಲ್ಲ ಅವರನ್ನ ಹಿಂಬಾಲಿಸಿದೆವು.       ಅಲ್ಲಿ ಒಂದು ಬಿಳಿ ಅಂಬಾಸಡರ್ ಕಾರು ನಿಂತಿದ್ದು ಅದರ ಅಡಿಯಲ್ಲಿ ಮಲಗಿ ಮೆಕ್ಯಾನಿಕ್ ದುರಸ್ತಿ ಮಾಡುತ್ತಿದ್ದರೆ ಎತ್ತರದ ಮಣ್ಣು ದಿಬ್ಬದ ಮೇಲೆ ನಮ್ಮ ನಟ ಉದಯ ಕುಮಾರ್ ಸಿಗರೇಟು ಸೇದಿ ಹೊಗೆ ಬಿಡುತ್ತಿದ್ದರು. ಯಾರೂ ಅವರ ಹತ್ತಿರ ಮಾತಾಡುವ ದೈಯ೯ ವಹಿಸಲಿಲ್ಲ ಆದರೆ ನೆರೆದ ಜನ ಮಾತಾಡಿಕೊಳ್ಳುತ್ತಿದ್ದ ಮಾತಿನ ಸಾರಾಂಶವೆಂದರೆ ವರದಳ್ಳಿಯಲ್ಲಿ ತಪಸ್ಸು ಮಾಡುತ್ತಿದ್ದ ಶ್ರೀಧರ ಸ್ವಾಮಿಗಳು ದೇಹತ್ಯಾಗ ಮಾಡಿದ್ದಾರೆ ಅದನ್ನ ಕೇಳಿ ಅವರ ಭಕ್ತ ಮತ್ತು ಶಿಷ್ಯರಾದ ಖ್ಯಾತ ಚಿತ್ರ ನಟ ಉದಯ ಕುಮಾರ್ ಬರುವಾಗ ಕಾರು ಹಾಳಾಗಿ ದುರಸ್ತಿಗಾಗಿ ನಿಂತಿದ್ದಾರೆ, ದುಃಖದಲ್ಲಿ ಇರೋದರಿಂದ ಆ ರೀತಿ ಸಿಗರೇಟು ಸೇದಿ ಬೂದಿ ಮಾಡುತ್ತಿದ್ದಾರೆ ಅವರ ಹತ್ತಿರ ಯಾರೂ ಮಾತಾಡ ಬೇಡಿ ಅಂತ ಸೀನಿಯರ್ ಗಳು ಹೇಳುತ್ತಿದ್ದರು, ಬಹುಶಃ ಆಗಿನ ಸಿನಿಮಾದಲ್ಲಿ ವಿಲನ