Skip to main content

Blog number 1319. ಗೋರಕಪುರದ ನಾಥಪಂಥದ ಮಹಾಂತರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಪ್ರತಿ 12 ವರ್ಷಕ್ಕೊಮ್ಮೆ ನಾಸಿಕ್ ಕುಂಭ ಮೇಳದ ಅಂತಿಮ ದಿನ ಹೊರಟು ಪಶ್ಚಿಮ ಘಟ್ಟದ ನಡುವೆ ಪಾತ್ರ ದೇವತೆ ತಲೆಯ ಮೇಲೆ ಹೊತ್ತು ನಡೆಯುತ್ತಾ ಮಂಗಳೂರಿನ ಕದ್ರಿ ತಲುಪುವ ಬಾರಾಪಂತ್ ಯಾತ್ರೆಯಲ್ಲಿ ಭಾಗವಹಿಸಿದ್ದರಾ?

ಗೋರಕ್ನಾಥರ ನಾಥಪಂತದ ಗೋರಕ್ಪುರದ ಸಂತ ಯೋಗಿ ಆದಿತ್ಯನಾಥರ ಸ್ಥಾನ ದೊಡ್ಡದು ಜಾತ್ಯತೀತ ಪರಂಪರೆಯ ಈ ಪಂಥ 5000 ವಷ೯ಕ್ಕೂ ಹಿಂದಿನ ಪರಂಪರೆ ಎಂಬ ನಂಬುಗೆ ಇದೆ, ಮನುವಾದ ಇಲ್ಲಿ ಆಚರಣೆ ಇಲ್ಲ, ಮಾಂಸಹಾರ, ಮಧ್ಯಪಾನ ಮತ್ತು ದೂಮಪಾನ ಇವರಿಗೆ ವಜ೯ ಇಲ್ಲ.
   ಕನಾ೯ಟಕದಲ್ಲಿನ ಶಿವಮೊಗ್ಗ ಜಿಲ್ಲೆಯ ಚಂದ್ರಗುತ್ತಿ, ಕುಂದಾಪುರ ಸಮೀಪದ ಹಲವಾರಿ ಮಠ ಮತ್ತು ಮಂಗಳೂರಿನ ಕದ್ರಿ ಮಠಗಳು ಇವರ ಅಧೀನವಾದದ್ದು.
  ಪ್ರತಿ 12 ವಷ೯ಕೊಮ್ಮೆ ನಾಸಿಕ ಕುಂಭಮೇಳದಿಂದ ಪ್ರಾರ೦ಭವಾಗಿ ಮಂಗಳೂರಿನ ಕದ್ರಿವರೆಗೆ ಪಶ್ಚಿಮ ಘಟ್ಟದ ಅರಣ್ಯದಲ್ಲಿ 6 ತಿಂಗಳು ಪಾದಯಾತ್ರೆಯಲ್ಲಿ ಬರುವ ಬಾರಾ ಪಂಥ ಜೋಂಡಿ ಯಾತ್ರೆಗೆ ಈ ಸಂತರೇ ಅಧಿಪತಿಗಳು.
   ನಾಥಪಂಥದಲ್ಲಿ ಯೋಗಿ ಆಗಿ 86 ಜನ್ಮ ಎತ್ತಿದರೆ ಮಾತ್ರ ಒಂದು ಸಾರಿ ಈ ಬಾರ ಪಂಥ ಜೋOಡಿಯಲ್ಲಿ ಅವಕಾಶ ಸಿಗುತ್ತೆ ಎನ್ನುವ ನಂಬಿಕೆ ಇವರಲ್ಲಿದೆ.
  ಯೋಗಿ ಆದಿತ್ಯ ನಾಥರು ಸಂತರಾಗುವ ಮೊದಲು ಈ ಯಾತ್ರೆಯಲ್ಲಿ ಭಾಗವಹಿಸಿದ್ದರೆಂದು ಹೇಳುತ್ತಾರೆ ಅದನ್ನ ಅವರೇ ದೃಡ ಪಡಿಸಬೇಕಷ್ಟೆ.
    ಇವರ ಹಿನ್ನೆಲೆ ನೋಡದೆ ವಿರೋದಿಸುವುದು ಸರಿಯಲ್ಲ.

NATHA PANTH BELONG TO GORAKHNATH GORAKPUR SECT,NONVEG, LIQUOR AND SMOKIN IS NO BAR TO THIS SECT.
YOGI ADITY NATH IS HEAD OF THIS SECT, EVERY 12YEAR ONCE GROUP OF YOGIS STARTING YATRA FROM NASIK.
    LAST DAY OF KUMBA MELA THIS BARAPANTH JUNDI STARTS TO KADRI OF MANGALORE ( KARNATAKA )BY WALKING.
    LAST YEAR 2016 MORE THAN 550 YOGIS IN THIS BARAPANTH JONDI YATRA, THIS YATRA SUPERVISION BELONG TO GORAKPUR MAHANTHA YOGI ADITYANATH.
  ONE MYTH IS WHO COMPLETED 86 LIFE OF YOGI ONLY GET APPORTUNITY OF ONE BARAPANTH JONDI YATRA.
  ONE RUMOUR IS YOGI ADITYANATH COMPLETED THIS YATRA.
   THIS SECT RESPECT ALL RELIGIONS, MADYAPRADES THIS SECT TEMPLE AND MASQUE IN SAME PLACE.
    NOW HE BECAME CHIEF MINISTER OF UP BUT HIS POSITION AS MAHANTHA TO GORAKPUR IS NOT SMALL AND NEGLECTABLE.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...