Skip to main content

Blog number 1467.ಆನಂದಪುರಂ ಇತಿಹಾಸ ಭಾಗ-3, ಕನಕಮ್ಮಳ್ ಆಸ್ಪತ್ರೆ

#ಬಾಗ_3

                   #ಕನಕಮ್ಮಾಳ್_ಆಸ್ಪತ್ರೆ

#ಅಯ್ಯಂಗಾರ್_ಕುಟುಂಬ_ಆನಂದಪುರಂ_ನಲ್ಲಿ_ಸ್ಥಾಪಿಸಿದ_ಆಸ್ಟತ್ರೆ.
#ಈ_ಆಸ್ಪತ್ರೆ_ನಿಮಾ೯ಣದ_ಹಿಂದಿದೆ_ಒಂದು_ಮುಖ್ಯ_ಕಾರಣ


       ರಾಮಕೃಷ್ಣ ಅಯ್ಯಂಗಾರರ ದಮ೯ ಪತ್ನಿ ಶೀಮತಿ ಕನಕಮ್ಮಾಳ್ ಅನಾರೋಗ್ಯದಿಂದ ಮರಣಿಸುತ್ತಾರೆ ಇದರಿಂದ ರಾಮಕೃಷ್ಣ ಅಯ್ಯಂಗಾರರು ತುಂಬಾ ದುಃಖಿತರಾಗುತ್ತಾರೆ, ಪತ್ನಿ ಕನಕಮ್ಮಾಳ್  ಅವರ ಆಭರಣ ಮಾರಾಟ ಮಾಡುತ್ತಾರೆ.
     ಆ ಹಣದಲ್ಲಿ ಈಗಿನ ಹೊಸನಗರ ತಾಲ್ಲೂಕಿನ ಹರತಾಳು ಸಮೀಪದ ಹುಣಸವಳ್ಳಿಯಲ್ಲಿ ದೊಡ್ಡ ಆಸ್ತಿ ಜಮೀನು ತೋಟ ಖರೀದಿಸುತ್ತಾರೆ.
     ಆದರೆ ಇದು ರಾಮಕೃಷ್ಣ ಅಯ್ಯಂಗಾರರಿಗೆ ಸಮಾದಾನ ತರುವುದಿಲ್ಲ, ಮುದ್ದಿನ ಮಡದಿಯ ಹೆಸರು ಚಿರಸ್ಥಾಯಿ ಆಗುವಂತೆ ಮಾಡಬೇಕೆಂಬ ಅದಮ್ಯ ಆಸೆ ಅವರಲ್ಲಿ ಚಿಗುರೊಡೆದಿರುತ್ತದೆ.
   ಹುಣಸಳ್ಳಿಯಲ್ಲಿ ಖರೀದಿಸಿದ್ದ ಆಸ್ತಿಯನ್ನು (ಜಮೀನು, ತೋಟ ಮನೆ) ಸ್ವಾಮಿ ಗೌಡರಿಗೆ ಅಂದರೆ ಈಗಿನ ಹುಣಸಳ್ಳಿ ಚಂದ್ರಶೇಖರ ಗೌಡರ ತಂದೆಗೆ ಮಾರುತ್ತಾರೆ, ಈಗಿನ ಆನಂದ ಪುರದಿಂದ ಬಟ್ಟೆಮಲ್ಲಪ್ಪ ರಸ್ತೆಯಲ್ಲಿ ಎಡ ಭಾಗದ ಹುಣಸಳ್ಳಿ ಶಾಲೆ ಅಕ್ಕ ಪಕ್ಕದ ಈ ಜಮೀನು ನೋಡ ಬಹುದು.
  ಇದನ್ನು ಖರೀದಿಸಿದ ಸ್ವಾಮಿ ಗೌಡರ ಮಗ ಚಂದ್ರಶೇಖರ ಗೌಡರು ಆನಂದಪುರದಲ್ಲಿ ಪ್ರೌಡ ಶಾಲಾ ಶಿಕ್ಷಕರಾಗಿ, ನಂತರ ಹೊಸನಗರ ತಾಲ್ಲೂಕ್ ಬೋಡ್೯ ಅಧ್ಯಕ್ಷರಾಗಿ, ಒಂದು ಅವದಿಗೆ ಹೊಸನಗರ ತಾಲ್ಲೂಕ್ ಕಾಂಗ್ರೇಸ್ ಪಕ್ಷದ ಅಧ್ಯಕ್ಷರೂ ಆಗಿ ಕಾರ್ಯನಿವ೯ಹಿಸಿದ ಸಜ್ಜನ ಜನಾನುರಾಗಿ ನಾಯಕರು.
     ಆ ಜಮೀನು ಮಾರಿದ ಹಣದಿಂದ ಆನಂದಪುರದ ಮಧ್ಯದ ಅತ್ಯಂತ ಬೆಲೆ ಬಾಳುವ ಸುಮಾರು ನಾಲ್ಕು ಎಕರೆ ವಿಸ್ತಿರ್ಣದ  ಸ್ವಂತ ವಿಶಾಲ ಜಾಗದಲ್ಲಿ ಸುಸಜ್ಜಿತವಾದ  ಆಸ್ಪತ್ರೆ ನಿಮಿ೯ಸುತ್ತಾರೆ.
    ಆ ಕಾಲದಲ್ಲಿಯೇ ಉಚಿತ ಔಷದಿ ಖರೀದಿಸಲು ಒಂದು ಲಕ್ಷ ರೂಪಾಯಿ ಠೇವಣಿ ಇಟ್ಟು ಅದರ ಬಡ್ಡಿಯಿಂದ ಔಷದಿ ಖರೀದಿಸಲು ಅನುವು ಮಾಡಿ ಈ ಆಸ್ಪತ್ರೆಗೆ ತಮ್ಮ ಪತ್ನಿಯ ಸ್ಮರಣಾಥ೯ #ಶ್ರೀಮತಿ_ಕನಕಮ್ಮಾಳ್_ಆಸ್ಪತ್ರೆ ಎಂದು ನಾಮಕರಣ ಮಾಡಿ  ಸಕಾ೯ರಕ್ಕೆ ವಹಿಸಿಕೊಡುತ್ತಾರೆ.
   ಈ ಆಸ್ಪತ್ರೆ ಒಂದು ಕಾಲದಲ್ಲಿ ತೀಥ೯ಹಳ್ಳಿ ತಾಲ್ಲೂಕಿನಿಂದ, ಹೊಸನಗರ ತಾಲ್ಲೂಕಿನಿಂದ, ಶಿಕಾರಿಪುರ ತಾಲ್ಲೂಕಿನಿಂದ  ಮತ್ತು ಸಾಗರ ತಾಲ್ಲೂಕಿನಿಂದ ಹೆಚ್ಚು ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದರು, ಆ ಕಾಲದಲ್ಲಿ ಈ ಆಸ್ಪತ್ರೆಯಲ್ಲಿ ಆಪರೇಷನ್ ಕೂಡ ಮಾಡುತ್ತಿದ್ದರು.
  ಪತ್ನಿಯ ಹೆಸರಲ್ಲಿ ನಿಮಿ೯ಸಿದ್ದ ಆಸ್ಪತ್ರೆ ಯಶಸ್ವಿಯಾಗಿ ನಡೆಯುವುದು ನೋಡಿ ದಾನಿಗಳಾದ ನಿಮಾ೯ತೃ ರಾಮಕೃಷ್ಣ ಅಯ್ಯಂಗಾರರು ಸಂತೃಪ್ತರಾಗುತ್ತಾರೆ, ಈ ಜನೋಪೋಯೋಗಿ ಕಾಯ೯ದಿಂದ ರಾಮಕೃಷ್ಣ ಅಯ್ಯಂಗಾರರ ಹೆಸರು ಕೂಡ  ಸಮಾಜದಲ್ಲಿ ಚಿರಸ್ಥಾಯಿ ಆಗಿ ಉಳಿಯಿತು.
   ಈಗಲೂ ಆನಂದಪುರದ ಊರ ಮಧ್ಯದ ಈ ಆಸ್ಪತ್ರೆ ಅಯ್ಯಂಗಾರರ ಕುಟುಂಬದ ಕೊಡುಗೆಯ ಕಥೆ ಹೇಳುತ್ತದೆ.
(ನಾಳೆ ಭಾಗ-4)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

ಶ್ರೀಧರ ಸ್ವಾಮಿ ವರದಳ್ಳಿ ಪವಾಡ ಪುರುಷರು.

   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವರದಳ್ಳಿಯ ತಪಸ್ವಿ ಶ್ರೀಧರ ಸ್ವಾಮಿಗಳು.   ವರದಳ್ಳಿ ಶ್ರೀಧರ ಸ್ವಾಮಿಗಳ ಬಗ್ಗೆ ಕೇಳಿದ್ದು, ಓದಿದ್ದು ಮತ್ತು ಅವರ ಒಡನಾಡಿಗಳನ್ನ ಭೇಟಿ ಮಾಡಿದ್ದು ಬಿಟ್ಟರೆ ಅವರನ್ನ ಪ್ರತ್ಯಕ್ಷವಾಗಿ ನೋಡಿಲ್ಲ.     ನಾವು ಚಿಕ್ಕವರಿದ್ದಾಗ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ಆಗಿನ ಕಾಲದ ಖ್ಯಾತ ಚಲನಚಿತ್ರ ನಟ ಉದಯ ಕುಮಾರ್ ಅರಳಿ ಮರದ ಗ್ಯಾರೇಜ್ ಹತ್ತಿರ ಬಂದಿದ್ದಾರೆ ಅಂತ ಊರಿನ ಜನರೆಲ್ಲ ಗುಂಪು ಗುಂಪಾಗಿ ಓಡುತ್ತಿದ್ದರು, ನಾವು ಚಿಕ್ಕ ಮಕ್ಕಳೆಲ್ಲ ಅವರನ್ನ ಹಿಂಬಾಲಿಸಿದೆವು.       ಅಲ್ಲಿ ಒಂದು ಬಿಳಿ ಅಂಬಾಸಡರ್ ಕಾರು ನಿಂತಿದ್ದು ಅದರ ಅಡಿಯಲ್ಲಿ ಮಲಗಿ ಮೆಕ್ಯಾನಿಕ್ ದುರಸ್ತಿ ಮಾಡುತ್ತಿದ್ದರೆ ಎತ್ತರದ ಮಣ್ಣು ದಿಬ್ಬದ ಮೇಲೆ ನಮ್ಮ ನಟ ಉದಯ ಕುಮಾರ್ ಸಿಗರೇಟು ಸೇದಿ ಹೊಗೆ ಬಿಡುತ್ತಿದ್ದರು. ಯಾರೂ ಅವರ ಹತ್ತಿರ ಮಾತಾಡುವ ದೈಯ೯ ವಹಿಸಲಿಲ್ಲ ಆದರೆ ನೆರೆದ ಜನ ಮಾತಾಡಿಕೊಳ್ಳುತ್ತಿದ್ದ ಮಾತಿನ ಸಾರಾಂಶವೆಂದರೆ ವರದಳ್ಳಿಯಲ್ಲಿ ತಪಸ್ಸು ಮಾಡುತ್ತಿದ್ದ ಶ್ರೀಧರ ಸ್ವಾಮಿಗಳು ದೇಹತ್ಯಾಗ ಮಾಡಿದ್ದಾರೆ ಅದನ್ನ ಕೇಳಿ ಅವರ ಭಕ್ತ ಮತ್ತು ಶಿಷ್ಯರಾದ ಖ್ಯಾತ ಚಿತ್ರ ನಟ ಉದಯ ಕುಮಾರ್ ಬರುವಾಗ ಕಾರು ಹಾಳಾಗಿ ದುರಸ್ತಿಗಾಗಿ ನಿಂತಿದ್ದಾರೆ, ದುಃಖದಲ್ಲಿ ಇರೋದರಿಂದ ಆ ರೀತಿ ಸಿಗರೇಟು ಸೇದಿ ಬೂದಿ ಮಾಡುತ್ತಿದ್ದಾರೆ ಅವರ ಹತ್ತಿರ ಯಾರೂ ಮಾತಾಡ ಬೇಡಿ ಅಂತ ...