Skip to main content

Blog number 1712. ನಮ್ಮೂರ ಯುವಕ ಸುಬ್ರಮಣ್ಯ ಸುರೇಂದ್ರರ ನೂತನ ಗೃಹ ಪ್ರವೇಶ ಆಹ್ವಾನ ಪತ್ರಿಕೆ ಜೊತೆಗೆ 20 ವರ್ಷದ ಹಿಂದಿನ ನೆನಪುಗಳ ಮೆಲಕು

#ಸುಬ್ರಮಣ್ಯ_ಸುರೇಂದ್ರ

#ನಮ್ಮ_ಊರಿನ_ಯುವಕನ_ಸಾಧನೆ.

#ಬೆಂಗಳೂರಿನ_ಜೆಪಿ_ನಗರದಲ್ಲಿ_ಮನೆ_ಗೃಹ_ಪ್ರವೇಶ.

#ಆಹ್ವಾನ_ಪತ್ರಿಕೆ_ನೀಡಲು_ಬಂದಿದ್ದರು.

#ಲಿಪಿ_ಡಾಟಾ_ಸಿಸ್ಟಂನಲ್ಲಿ_ರೀಜನಲ್_ಮ್ಯಾನೇಜರ್.

#ನಮ್ಮ_ಊರಿನ_ಅಯ್ಯಪ್ಪ_ಸ್ವಾಮಿ_ಭಕ್ತರ_ಗುರುಸ್ವಾಮಿ_ಕುರೂಪಣ್ಣರ_ಮಗ.


   ಮೊನ್ನೆ ನನಗೆ ಗೃಹ ಪ್ರವೇಶದ ಆಹ್ವಾನ ಪತ್ರಿಕೆ ನೀಡಲು ನಮ್ಮ ಊರಿನ ಅಯ್ಯಪ್ಪ ಸ್ವಾಮಿ ಭಕ್ತ ಮಂಡಳಿಯ ಹಿರಿಯ ಗುರುಸ್ವಾಮಿ ಕುರೂಪಣ್ಣರ ಕಿರಿಯ ಪುತ್ರ ಸುಬ್ರಮಣ್ಣ ಸುರೇಂದ್ರ ಅವರ ಅಣ್ಣ ಶಿವಕುಮಾರ್ ಜೊತೆ ಬಂದಿದ್ದರು.
   ಕೇರಳದಿಂದ ಬಂದ ಕುರೂಪಣ್ಣ ನಮ್ಮ ಊರಲ್ಲಿ ಅವರನ್ನು ಜನ ಪ್ರೀತಿಯಿ0ದ ಕರೆಯುವ ಹೆಸರು ಆದರೆ ಇವರ ನಿಜ ಹೆಸರು ಸುರೇಂದ್ರ.
    ಇವರ ಕಿರಿಯ ಪುತ್ರ ಸುಬ್ರಮಣ್ಯ ಆನಂದಪುರಂನಲ್ಲಿಯೇ ಪ್ರಾಥಮಿಕ ಶಿಕ್ಷಣ ಮಾಡಿದವರು ನಂತರ ಬೆಂಗಳೂರಲ್ಲಿ ಹಿಟಾಚಿ ಪೇಯಮೆಂಟ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ಈಗ ಲಿಪಿ ಡಾಟಾ ಸಿಸ್ಟಂನಲ್ಲಿ ರೀಜನಲ್ ಮ್ಯಾನೇಜರ್ ಆಗಿ ಕಾಯ೯ನಿವ೯ಹಿಸುತ್ತಿದ್ದಾರೆ.
   ಬೆಂಗಳೂರಿನ ಜೆಪಿ ನಗರದಲ್ಲಿ ಹೊಸ ಮನೆ ನಿರ್ಮಿಸಿದ್ದಾರೆ, ಮನೆಗೆ #ಮದ್ದುಬನ ಎಂದು ನಾಮಕರಣ ಮಾಡಿದ್ದಾರೆ.
   ದಿನಾಂಕ 27- ಆಗಸ್ಟ್ - 2023ರ ಭಾನುವಾರದಂದು ನಡೆಯುವ ಗೃಹಪ್ರವೇಶ ಕಾಯ೯ಕ್ರಮದ ಆಹ್ವಾನ ಪತ್ರಿಕೆ ನೀಡಲು ಬಂದಿದ್ದರು.
   ಪ್ರತಿ ದಿನ ನನ್ನ ಪೇಸ್ ಬುಕ್ ಪೋಸ್ಟ್ ನೋಡುತ್ತಾರಂತೆ ಈ ಬಗ್ಗೆ ಮಾತಾಡುತ್ತಾ ನನಗೆ ಮರೆತೇ ಹೋಗಿದ್ದ ಒಂದು ಘಟನೆ ಅವರು ನೆನಪಿಸಿದರು ಅದೇನೆಂದರೆ 20 ವರ್ಷದ  ನಾನು ಇವರನ್ನು ಸಂಸದ ಐ.ಎಂ.ಜಯರಾಂ ಶೆಟ್ಟರ ಬಸವೇಶ್ವರ ನಗರದ ಮನೆಗೆ ಕರೆದೊಯ್ದು ಅವರ ಮಲ್ಟಿವಿನ್ ಸಂಸ್ಥೆಯಲ್ಲಿ ಉದ್ಯೋಗ ಕಲ್ಪಿಸಲು ನಾನು ಪ್ರಯತ್ನಿಸಿದ್ದೆ.
   ಈಗ ದೊಡ್ಡ ಹುದ್ದೆಯಲ್ಲಿರುವ ನಮ್ಮ ಊರಿನ ಈ ಯುವಕ ಸುಬ್ರಮಣ್ಯ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿಯಾಗಿರುವುದು ನನಗೆ ಹೆಮ್ಮೆಯ ವಿಷಯ ಕೂಡ ನಮ್ಮ ಹಳ್ಳಿ ಹುಡುಗರು ಬೆಂಗಳೂರಲ್ಲಿ ಸ್ವಂತ ಮನೆ ನಿಮಿ೯ಸುವುದು ಸುಲಭವಲ್ಲ ಮತ್ತು 20 ವರ್ಷದ ಹಿಂದಿನ ನೆನಪು ಮಾಡಿಕೊಂಡು ಬಂದು ಗೃಹ ಪ್ರವೇಶದ ಆಹ್ವಾನ ಪತ್ರ ನೀಡುವುದು ಕೂಡ ಸಣ್ಣ ವಿಷಯವಲ್ಲ.
   ಸುಬ್ರಮಣ್ಯರ ಮಾತು ನಯ ವಿನಯ ನನಗೆ ಇಷ್ಟವಾಯಿತು ಈಗಿನ ದಿನಗಳ ವೇಗದ ಜಗತ್ತಿನಲ್ಲಿ ಎಲ್ಲರನ್ನೂ ಮರೆತು ಬಿಡುವುದು ಸಹಜ ಆದರೆ 20 ವರ್ಷದ ಹಿಂದಿನ ನೆನಪು ಮಾಡಿಕೊಂಡು ಬಂದ ಸುಬ್ರಮಣ್ಯ ಬಿನ್ನವಾಗಿ ಕಂಡರು.
 ನೂತನ ಗೃಹ ಪ್ರವೇಶ ಕಾಯ೯ಕ್ರಮ ಯಶಸ್ವಿ ಆಗಲಿ ಮತ್ತು ಸುಬ್ರಮಣ್ಯರ ಕುಟುಂಬಕ್ಕೆ ದೇವರು ಆಯುರಾರೋಗ್ಯ ಆಯಸ್ಸು ಮತ್ತು ಐಶ್ವರ್ಯ ನೀಡಲಿ ಎಂದು ಶುಭ ಹಾರೈಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...