Skip to main content

Blog number 1978. ಕೆ. ಶಿವರಾಂ ನೆನಪು ಭಾಗ-1. ಕನ್ನಡದಲ್ಲಿ ಐಎಎಸ್ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗ ಕೆ.ಶಿವರಾಂ ಅಸ್ತಂಗತ

#ಕೆ_ಶಿವರಾಂ_ನೆನಪು_ಭಾಗ_1

#ನನ್ನ_ಅತ್ಯಂತ_ಆಪ್ತ_ಕನ್ನಡದ_ಐಎಎಸ್

#ಕೆ_ಶಿವರಾಂ_ಅಸ್ತಂಗತ

#ಅವರ_ಆತ್ಮಕ್ಕೆ_ಸದ್ಗತಿ_ಸ್ವರ್ಗ_ಪ್ರಾಪ್ತಿಗಾಗಿ_ಪ್ರಾರ್ಥಿಸುತ್ತೇನೆ

#ಸಂತಾಪ_ಸೂಚಿಸುತ್ತಾ_ಅವರ_ನೆನಪಿನ_ಕೆಲ_ಕಂತುಗಳ_ಲೇಖನ.
   ಮೊನ್ನೆ ರಾತ್ರಿ ಅವರ ಅಳಿಯ ಮಾಧ್ಯಮದವರಿಗೆ ತಿಳಿಸುತ್ತಿದ್ದದ್ದು ನೋಡಿದೆ,71 ವರ್ಷದ ಶಿವರಾಂ ಅವರು ಫೆಬ್ರವರಿ ಮೂರನೆ ತಾರೀಕು ಸಣ್ಣ ಆಪರೇಷನ್ಗಾಗಿ ಆಸ್ಪತ್ರೆಗೆ ದಾಖಲಾದವರು ಸತತ ಆರೋಗ್ಯದ ಏರುಪೇರಿನಿಂದ ಚೇತರಿಸಿಕೊಳ್ಳಲೇ ಇಲ್ಲ.
  ಅದೇ ದಿನ ಹೃದಯಾಘಾತಕ್ಕೆ ಒಳಗಾದರೂ ಅವರ ಆರೋಗ್ಯ ಸ್ಥಿತಿ ತುಂಬಾ ಕ್ರಿಟಿಕಲ್ ಎಂದಾಗಲೇ ನನಗೆ ಅನುವಾನವಾಗಿತ್ತು.
    ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಬಿಜೆಪಿಯಿಂದ ಚಾಮರಾಜನಗರದ ಅಭ್ಯರ್ಥಿಯನ್ನಾಗಿ ಮಾಡುವ ಯೋಜನೆ ಯಡಿಯೂರಪ್ಪನವರದಾಗಿತ್ತು ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ಸೇರಿದ ಶ್ರೀನಿವಾಸ್ ಪ್ರಸಾದರಿಗಾಗಿ ಶಿವರಾಂ ಟಿಕೆಟ್ ವಂಚಿತರಾದರು ಆದರೂ ಶ್ರೀನಿವಾಸ ಪ್ರಸಾದರ ಪರವಾಗಿ ದೊಡ್ಡ ಕ್ಯಾಂಪೈನ್ ಮಾಡಿದ್ದರು.
  ಆಗ ಶ್ರೀನಿವಾಸ್ ಪ್ರಸಾದರು ಅವರಿಗೆ ನೀಡಿದ ಭರವಸೆ ಮುಂದಿನ ಬಾರಿ ನಾನು ವಯಸ್ಸಿನ ಮತ್ತು ಆರೋಗ್ಯ ಕಾರಣದಿಂದ ಸ್ಪರ್ಧಿಸುವುದಿಲ್ಲ ಶಿವರಾಂ ಅವರೆ ಈ ಕ್ಷೇತ್ರದ ಮುಂದಿನ ಅಭ್ಯರ್ಥಿ ಎಂದಿದ್ದರು.
   ಆದರೆ ಇತ್ತೀಚೆಗೆ ಶ್ರೀನಿವಾಸ್ ಪ್ರಸಾದರು ತಮ್ಮ ಇಬ್ಬರೂ ಅಳಿಯಂದಿರಲ್ಲಿ ಯಾರಿಗಾದರೂ ಒಬ್ಬರಿಗೆ ತಮ್ಮ ನಂತರದ ಅಭ್ಯರ್ಥಿ ಮಾಡುವ ಯೋಜನೆ ಘೋಷಿಸಿದರು.
    ಕೆ.ಶಿವರಾಂ ಅವರಿಗೆ ಮಾಯಾವತಿ ಮುಖ್ಯಮಂತ್ರಿ ಆದಾಗ ಬಿ.ಎಸ್.ಪಿ. ಸುಪ್ರಿಮೊ ಕಾಶ್ವಿರಾಮ್ ಅವರು ರಾಜಕೀಯಕ್ಕೆ ಬರಲು ಮತ್ತು ಕರ್ನಾಟಕದಲ್ಲಿ ಬಿಎಸ್ಪಿ ಪಕ್ಷ ಕಟ್ಟಲು ನೇತೃತ್ವ ವಹಿಸಲು ಆಹ್ವಾನಿಸಿದ್ದರು.
  ಐಎಎಸ್ ಅಂತ ವೃತ್ತಿಯನ್ನು ಬಿಟ್ಟು ರಾಜಕಾರಣಕ್ಕೆ ಬರಬೇಕಾದರೆ ತನಗೆ ರಾಜ್ಯಸಭಾ ಸದಸ್ಯರನ್ನು ಮಾಡಿ ಎಂಬ ಕರಾರು ಶಿವರಾಂ ಅವರಿಗೆ ಹಾಕಿದ್ದರು.
   ಶಿವರಾಮ ಅವರು ನಿವೃತ್ತಿ ಪಡೆದ ನಂತರ ರಾಜಕಾರಣಕ್ಕೆ ಹೋಗಬಾರದಿತ್ತು.. ರಾಜಕೀಯ ಪಕ್ಷಗಳು ಅವರನ್ನು ಅವರ ಬುದ್ಧಿಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಅಥವ ರಾಜಕೀಯ ಪಕ್ಷಗಳು ಇಂಥವರನ್ನು ಯಾವತ್ತು ಬಳಸಿಕೊಳ್ಳುವುದು ಇಲ್ಲ.
  ಶಿವರಾಮುರು ನಿವೃತ್ತಿ ನಂತರ ಇಡೀ ರಾಜ್ಯದ ಯುವಜನತೆಗೆ ವಿದ್ಯೆ - ಉದ್ಯೋಗ- ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಪ್ರೇರಣೆ ನೀಡುವಂತ ಸಂಸ್ಥೆಯೊಂದನ್ನು  ಕಟ್ಟಿ ಕಾರ್ಯನಿರ್ವಹಿಸುವ ಕೆಲಸ ಮಾಡಬೇಕಾಗಿತ್ತು.
   ಈಗ ಶಿವರಾಂ ಇಲ್ಲ ಆದರೆ ಅವರ ಜೀವನದ ಹೋರಾಟದ ಫಲಗಳು ಮುಂದಿನ ಯುವ ಪೀಳಿಗೆಗೆ ಒಂದು " ಛಲವಿದ್ದರೆ ಸಾಧ್ಯವಿದೆ" ಎಂಬ ಪ್ರೇರಣೆಯ ಕಥೆಯಾಗಿದೆ.
   ಶಿವರಾಂ ಅವರ ಆತ್ಮಕ್ಕೆ ಸದ್ಗತಿ ಸ್ವರ್ಗ ಪ್ರಾಪ್ತಿಗಾಗಿ ಪ್ರಾರ್ಥಿಸುತ್ತೇನೆ.

  ( ನಾಳೆ ಭಾಗ 2.. ಕೆ.ಶಿವರಾಂ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಬಂದಾಗ.)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...