Skip to main content

Blog number 2189. ಇದು ತರಹಾವಾರಿ ರುಚಿಕರ ಮಲೆನಾಡನ ಮುಂಗಾರು ಆರಂಭದ ಅಣಬೆಗಳ ಕಾಲ.

#ಮು೦ಗಾರು_ಮಳೆ_ಪ್ರಾರಂಭ_ಆಗಿದೆ.
#ಮಲೆನಾಡಿನ_ಸಂಪ್ರದಾಯಿಕ_ಆಹಾರ_ಕೂಡ

#ಕಳಲೆ_ಮರಕೆಸ_ಅಣಬೆ_ಹೀಗೆ....#ಸಾಗಿದೆ_ಉದ್ದ_ಪಟ್ಟಿ_ಸಾಲು

#ತರಹೇವಾರಿ_ಅಣಬೆಗಳಲ್ಲಿ_ತಿನ್ನಬಾರದ್ದು_ಹೆಚ್ಚು_ಇದೆ

#ಸಂಪ್ರದಾಯಿಕ_ಮೇಲ್ವರ್ಗದ_ಬ್ರಾಹ್ಮಣ_ಮತ್ತು_ಲಿಂಗಾಯಿತರ_ಕುಟುಂಬಗಳಲ್ಲಿ

#ಅಣಬೆ_ಆಹಾರವಾಗಿ_ಸ್ವೀಕರಿಸಲು_ಅವಕಾಶ_ಇಲ್ಲ_ನಿಷೇದ_ಇದೆ.

#ಸಸ್ಯ_ವರ್ಗದ_ಅಣಬೆ_ಶಿಲೀಂದ್ರವಾದ್ದರಿಂದ_ಇದನ್ನು_ಬಳಸುವುದಿಲ್ಲ.

   ಪಶ್ಚಿಮ ಘಟ್ಟದಲ್ಲಿ 51 ವಿದದ ಅಣಬೆಗಳಲ್ಲಿ 8 ವಿದದ ಅಣಬೆ ಮಾತ್ರ ತಿನ್ನಲು ಯೋಗ್ಯವಂತೆ. ತರಕಾರಿ ಗುಂಪಿನ ಸಸ್ಯ ವರ್ಗಕ್ಕೆ ಸೇರಿದ ಈ ಶಿಲೀಂದ್ರ  ಅಣಬೆ ಉತ್ತಮ ಆಹಾರ ಮತ್ತು ಇದರಲ್ಲಿ ಶರ್ಕರ ಪಿಷ್ಟ ಕಡಿಮೆ ಇರುವುದರಿಂದ ಡಯಾಬಿಟೀಸ್ ಇರುವವರಿಗೆ ಒಳ್ಳೆಯ ಆಹಾರ ಇದು.
   ನಾನು ನೋಡಿದ್ದು ಇದರಲ್ಲಿ ಕೆಲವೇ ಕೆಲವು ಮತ್ತು ತಿಂದಿದ್ದು ಇನ್ನೂ ಕೆಲವು ಮಾತ್ರ.
    ನಮ್ಮಲ್ಲಿ  ಹೆಚ್ಚಾಗಿ ಸಿಗುವುದು #ಹೆಗ್ಗಲಾಣಬೆ ಅಂತ( ಇದನ್ನು ಬೇರೆ ಹೆಸರಲ್ಲೂ ಕರೆಯುತ್ತಾರೆ) ಇದರಲ್ಲಿ ಕಪ್ಪು ಮೊಗ್ಗು ಮತ್ತು ಬಿಳಿ ಮೊಗ್ಗು ಎಂಬ ಎರೆಡು ವಿದವಿದೆ.
  ಮುಂಗಾರು ಮಳೆ ಪ್ರಾರಂಭದಲ್ಲಿ ಮತ್ತು ಮುಕ್ತಾಯದ ದಿನಗಳಲ್ಲಿ ಅರಣ್ಯ ಪ್ರದೇಶದಲ್ಲಿ ದೊರೆಯುತ್ತದೆ ಇದಕ್ಕೆ ಬೇಡಿಕೆ ಜಾಸ್ತಿ, ರುಚಿ ಜಾಸ್ತಿ ಆದ್ದರಿಂದ ಕೆಜಿಗೆ 300 ಕ್ಕೂ ಹೆಚ್ಚು ಬೆಲೆಗೆ ಮಾರಾಟ ಆಗುತ್ತೆ.
  #ನುಚ್ಚಾಣುಬೆ ಹೆಸರು ಹೇಳುವಂತೆ ಸಣ್ಣ ಗಾತ್ರದ್ದು, ರುಚಿ ಜಾಸ್ತಿ ಆದರೆ ಇದನ್ನು ಕಿತ್ತು ತಂದು ಸ್ವಚ್ಚ ಮಾಡುವುದು ಮೈತುಂಬಾ ಕೆಲಸವಾದ್ದರಿಂದ ಇದರ ಬಳಕೆ ಸಲೀಸಲ್ಲ. (ಸಣ್ಣವನಾಗಿದ್ದಾಗ ತಿಂದ ನೆನಪು)
  #ಎಣ್ಣಾಣುಬೆ (ಮೇಲ್ಪದರ ಎಣ್ಣೆ ಇದ್ದ೦ತೆ ಇರುತ್ತದೆ) ಇದು ಕೂಡ ಅತ್ಯಂತ ರುಚಿಕರವಾದ ಅಣುಬೆ ಹೆಚ್ಚು ಜನ ಬಳಸುತ್ತಾರೆ.
  ರಾಣಿ ಬೆನ್ನೂರು ಹುಬ್ಬಳಿ ಬಾಗದಲ್ಲಿ ಹುತ್ತದ ಮಣ್ಣಿನಲ್ಲಿ ಹೆಚ್ಚು ಬೆಳೆಯುವ #ಹುತ್ತದ_ಅಣಬೆ ಬಳಕೆಯಲ್ಲಿದೆ. (ನಾನು ರುಚಿ ನೋಡಿಲ್ಲ)
   ದೂಪದ ಮರದ ಬುಡದಲ್ಲಿ ಬೀಳುವ ಒಣ ಎಲೆ ಮರೆಯಲ್ಲಿ ಬರುವ ಕಪ್ಪು ಬಣ್ಣದ ತಲೆಯ #ಮಣ್ಣು_ಆಣಬೆ ಅತ್ಯಂತ ರುಚಿಕರ ಅಂತೆ ಆದರೆ ಇದು ಸಾವಿರ ರೂಪಾಯಿ ಕೊಟ್ಟರು ಸಿಗುವುದಿಲ್ಲ. (ಪ್ರಯತ್ನ ಪಟ್ಟರು ಸಿಕ್ಕಿಲ್ಲ)
   #ಕೂಗಲು_ಅಣಬೆ ಕೋಳಿ ಮಾಂಸದ ರುಚಿ ಇರುತ್ತದೆ, ಕಿತ್ತಳೆ ಹಣ್ಣಿನ ಗಾತ್ರದ ಮೇಲು ಬಾಗ ಅರಿಶಿಣ ಬಣ್ಣ ಒಳಗೆ ಕಪ್ಪು ಮತ್ತು ಬಿಳಿ ಬಣ್ಣದ ಈ ಅಣಬೆಗೆ ಬಾರೀ ಬೇಡಿಕೆ ಇದೆ. (ಗೆಳೆಯರ ಅನುಭವ)
   ಕೊಡಗಿನ #ಮ್ಯಾಜಿಕ್_ಮಷ್ರೂ೦ ತಿಂದರೆ 24 ಗಂಟೆ ಅಮಲು ಇರುತ್ತದೆ ಎನ್ನುವ ಸುದ್ದಿ ಇದೆ. (ಪ್ರವಾಸೋದ್ಯಮ ಲೇಖನದಲ್ಲಿ ಮಾತ್ರ ನೋಡಿದ್ದು)
  ಅಣಬೆ ಖಾಧ್ಯದ ಜೊತೆ ಬಿಸಿ ಬಿಸಿ ಅಕ್ಕಿ ರೊಟ್ಟಿ ಅತ್ಯುತ್ತಮ ಕಾಂಬಿನೇಷನ್.
  ಕೃತಕವಾಗಿ ಬೆಳೆದು ಮಾರಾಟ ಮಾಡುವ ಅಣಬೆ ಉದ್ಯಮವೂ ಬೆಳೆದಿದೆ ಆದರೆ ಪಶ್ಚಿಮ ಘಟ್ಟದ ಮುಂಗಾರು ಮಳೆ ಅವಲಂಬಿಸಿ ನೈಸರ್ಗಿಕವಾಗಿ ಬೆಳೆಯುವ ಅಣಬೆ ರುಚಿ ಮಾತ್ರ ವಿಶಿಷ್ಟ.
   ಸಂಪ್ರದಾಯಿಕ ಮೇಲ್ವರ್ಗದ ಬ್ರಾಹ್ಮ ಮತ್ತು ಲಿಂಗಾಯಿತರ ಕುಟುಂಬಗಳಲ್ಲಿ ಅಣಬೆ ಆಹಾರವಾಗಿ ಸ್ವೀಕರಿಸಲು ಅವಕಾಶ ಇಲ್ಲ ನಿಷೇದ ಇದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...