Skip to main content

Blog number 2280.#ಮಾನವನಾಗಿ_ಹುಟ್ಟಿದ_ಮೇಲೆ_ಏನೇನು_ಕಂಡೆ#ಸಾಯೋ_ತನಕ_ಸಂಸಾರದೊಳಗೆ_ಗಂಡಾ_ಗುಂಡಿ#ಹೇರಿಕೊಂಡು_ಹೋಗೋದಿಲ್ಲ_ಸತ್ತಾಗ_ಬಂಡಿ#ಇರೋದರೊಳಗೆ_ಒಮ್ಮೆ_ನೋಡು_ಜೋಗದ್_ಗುಂಡಿ#ಪ್ರಸಿದ್ಧ_ಲಾವಣಿ_ಬರೆದವರು_ಮೂಗೂರು_ಮಲ್ಲಪ್ಪನವರು

#ಮಾನವನಾಗಿ_ಹುಟ್ಟಿದ_ಮೇಲೆ_ಏನೇನು_ಕಂಡೆ

#ಸಾಯೋ_ತನಕ_ಸಂಸಾರದೊಳಗೆ_ಗಂಡಾ_ಗುಂಡಿ

#ಹೇರಿಕೊಂಡು_ಹೋಗೋದಿಲ್ಲ_ಸತ್ತಾಗ_ಬಂಡಿ

#ಇರೋದರೊಳಗೆ_ಒಮ್ಮೆ_ನೋಡು_ಜೋಗದ್_ಗುಂಡಿ

#ಪ್ರಸಿದ್ಧ_ಲಾವಣಿ_ಬರೆದವರು_ಮೂಗೂರು_ಮಲ್ಲಪ್ಪನವರು

#ಈ_ಲಾವಣಿ_ಸಂಗ್ರಹಿಸಿದವರು_ಜನಪದ_ಇತಿಹಾಸ_ತಜ್ಞ_ತರೀಕೆರೆ_ವಕೀಲರಾದ_ಕೆ_ಆರ್_ಲಿಂಗಪ್ಪನವರು.

#ಡಾ_ರಾಜಕುಮಾರ್_ಜೀವನ_ಜೈತ್ರ_ಸಿನಿಮಾದಲ್ಲಿ_ಈ_ಹಾಡು_ಸ್ವತಃ_ಹಾಡಿದ್ದಾರೆ.

https://youtu.be/QvRIOhCBWzI?si=s_kqOjjzfA2cVjTh


     ಮೂಗೂರು ಮಲ್ಲಪ್ಪನವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ  ಶಿರಳುಕೊಪ್ಪ ಸಮೀಪದ ಸಿರಿಯಾಳ ಕೊಪ್ಪ ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯರು.
   ಚಿಕ್ಕಮಗಳೂರು ಕಡೂರು ಶಾಲೆಗಳನ್ನು ಕೂಡ ದಕ್ಷತೆಯಿಂದ ಪಾಠ ಮಾಡುತ್ತಿದ್ದಂತಹ ಮೇಷ್ಟ್ರು,ತಾನು ಪಾಠ ಮಾಡುತ್ತಿದ್ದ ಮಕ್ಕಳಿಗೆ ಸಂಗೀತ ಲಯ ಭಾಷೆಯ ಸೊಗಡು ಸೊಗಸು ಜೊತೆಗೆ ಸುಲಲಿತವಾಗಿ ಹಾಡಿನ ಮೂಲಕ ನಾಡಿನ ಹಿರಿಮೆಯನ್ನು ಮಕ್ಕಳ ಮನದಲ್ಲಿ ನೆಟ್ಟ ಮೇಷ್ಟ್ರು.
   ಮೂಗೂರು ಮಲ್ಲಪ್ಪನವರು ತಮ್ಮ ವಿದ್ಯಾರ್ಥಿಗಳಿಗೆ ಜೋಗ ಜಲಪಾತ ತೋರಿಸಲು ಬಂದಾಗ ಅವರ ಮನದಲ್ಲಿ ಮೂಡಿದ ಈ ಸುಂದರ ಹಾಡು ಇದನ್ನು ಸಂಗ್ರಹಿಸಿ ಪ್ರಕಟಿಸಿದವರು ಜನಪದ ಇತಿಹಾಸ ತಜ್ಞ ವಕೀಲರು ಆದ ತರೀಕೆರೆಯ ಕೆಆರ್ ಲಿಂಗಪ್ಪನವರು.
  ಆಗಿನ ಮೈಸೂರು ಸರ್ಕಾರ ದಿನಾಂಕ 24 - ಜನವರಿ- 1965 ರಲ್ಲಿ ಈ ಲಾವಣಿಯನ್ನು ಕರಪತ್ರದಲ್ಲಿ ಮುದ್ರಿಸಿ, ಸಾರ್ವಜನಿಕರಿಗೆ ಹಂಚಿತ್ತು.
   ಈ ಲಾವಣಿಯ ಕೊನೆಯ ಭಾಗದಲ್ಲಿ ಶರಾವತಿ ನದಿಯನ್ನು ಕೂಡ ಉಲ್ಲೇಖಿಸುತ್ತಾರೆ...
   "ಶರಾವತಿ ಕನ್ನಡ ನಾಡ ಭಾಗಿರತಿ"

  "ಪುಣ್ಯವಂತರು ಬರ್ತಾರೆ ಇಲ್ಲಿ ದಿನಂಪ್ರತಿ"

  "ಸಾವು ನೋವು ಸುಳಿಯದಿಲ್ಲಿಯ ಕರಾಮತಿ"

  "ಮಲ್ಲೇಶನ್ನ ನೆನೆಯುತ್ತಿದ್ದರೆ ಜೀವನ್ಮುಕ್ತಿ"
ಈ ಹಾಡನ್ನು 1992 ರಲ್ಲಿ ಕನ್ನಡಿಗರ ಕಣ್ಮಣಿ ಡಾ. ರಾಜಕುಮಾರ್ ತಮ್ಮ ಜೀವನ ಚೈತ್ರ ಸಿನಿಮಾದಲ್ಲಿ ಅಳವಡಿಸಿಕೊಂಡಿದ್ದಾರೆ ಮತ್ತು ಈ ಹಾಡನ್ನು ಅವರೇ ಸ್ವತಃ ಹಾಡಿದ್ದಾರೆ.

 #ಪೂರ್ತಿ_ಲಾವಣಿ_ಇಲ್ಲಿದೆ...

ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡಿ
ಸಾಯೋತನಕಾ ಸಂಸಾರ್ ದೊಳಗೆ ಗಂಡಾಗುಂಡಿ
ಹೇರಿಕೊಂಡು ಹೋಗೋದಿಲ್ಲ ಸತ್ತಾಗ್ ಬಂಡಿ
ಇರೋದರೊಳಗೆ ನೋಡು ಒಮ್ಮೆ ಜೋಗದ ಗುಂಡಿ

ತಾಳಗುಪ್ಪಿ ತಾರಕಂಬ ಬೊಂಬಾಯ್ ಮಠ
ಸಾಲಗುಡ್ಡದ ಮ್ಯಾಲೆ ನೋಟಕ್ ಭಟ್ಕಳ್ ಮಠ
ದಾರಿ ಕಡಿದು ಮಾಡಿದಾರೆ ಗುಡ್ಡಾ ಬೆಟ್ಟ
ಪಶ್ಚಿಮ ಘಟ್ಟದ ಮ್ಯಾಲೆ ನೋಡು ಮೈಸೂರ್ ಬಾವುಟ

ನಾಡಿನೊಳಗೆ ನಾಡು ಚೆಲುವು ಕನ್ನಡ ನಾಡು
ಬೆಳ್ಳಿ ಬಂಗಾರ ಬೆಳಿಯುತಾವೆ ಬೆಟ್ಟ ಕಾಡು
ಭೂಮಿತಾಯಿ ಮುಡಿದು ನಿಂತ ಬಾಸಿಂಗ ಜೋಡು
ಬಾಣಾವತಿ ಬೆಡಗಿನಿಂದ ಬರ್ತಾಳೆ ನೋಡು

ಅಂಕು ಡೊಂಕು ವಂಕಿ ಮುರಿ ರಸ್ತೆ ದಾರಿ
ಹತ್ತಿ ಇಳಿದು ಸುತ್ತಿದಂಗೆ ಹಾವಿನ ಮರಿ
ತೊಟ್ಟಿಲ ಜೀಕಿ ಆಡಿದ್ಹಾಂಗೆ ಮನಸಿನ ಲಹರಿ
ನಡೆಯುತದೆ ಮೈಸೂರೊಳಗೆ ದರಂದುರಿ

ಹೆಸರು ಮರ್ತಿ ಶರಾವತಿ ಅದೇನ್ ಕಷ್ಟ
ಕಡೆದ ಕಲ್ಲ ಕಂಬದ ಮ್ಯಾಲೆ ಪೂಲಿನಕಟ್ಟ
ಎಷ್ಟು ಮಂದಿ ಎದೆಯ ಮುರ್ದು ಪಡತಾರ್ ಕಷ್ಟ
ಸಣ್ಣದರಿಂದ ದೊಡ್ಡದಾಗಿ ಕಾಣೋದ್ ಬೆಟ್ಟ

ಬುತ್ತಿ ಉಣುತಿದ್ ರುಣ್ಣು ಇಲ್ಲಿ ಸೊಂಪಾಗಿದೆ
ಸೊಂಪು ಇಂಪು ಸೇರಿ ಮನಸು ಕಂಪಾಗ್ತದೆ
ಕಂಪಿನಿಂದ ಜೀವಕ್ಕೊಂದು ತಂಪಾಗ್ತದೆ
ತಂಪಿನೊಳಗೆ ಮತ್ತೊಂದೇನೋ ಕಾಣಸ್ತದೆ

ಅಡ್ಡ ಬದಿ ಒಡ್ಡು ನಿಲ್ಲಿಸಿ ನೀರಿನ ಮಿತಿ
ಇದರ ಒಳಗೆ ಇನ್ನು ಒಂದು ಹುನಾರೈತಿ
ನೀರ ಕೆಡವಿ ರಾಟೆ ತಿರುವಿ ಮಿಂಚಿನ ಶಕ್ತಿ
ನಾಡಿಗೆಲ್ಲ ಕೊಡ್ತಾರಂತೆ ದೀಪದ ತಂತಿ

ಊಟ ಮುಗಿದಿದ್ರೇಳು ಮುಂದೆ ನೋಡೋದದೆ
ನೋಡುತಿದ್ರೆ ಬುದ್ದಿ ಕೆಟ್ಟು ಹುಚ್ಚಾಗ್ತದೆ
ಬೇಕಾದ್ರಲ್ಲಿ ಉಡುಪಿ ಮಾವನ ಮನೆಯೊಂದಿದೆ
ಉಳಿಯೋದಾದ್ರೆ ಮಹಾರಾಜ್ರ ಬಂಗ್ಲೆ ಅದೇ

ನೋಡು ಗೆಳೆಯ ಜೋಕೆ ಮಾತ್ರ ಪಾತಾಳ ಗುಂಡಿ
ಹಿಂದಕೆ ಸರಿದು ನಿಲ್ಸಿ ತುಸು ಕೈತಪ್ಕೊಂಡಿ
ಕೈಗಳಲ್ಲಿ ಕಾಣಸ್ತದೆ ಬೊಂಬಾಯ್ ದಂಡೀ
ನಮ್ಮದಂದ್ರೆ ಹೆಮ್ಮೆಯಲ್ವೆ ಜೋಗದ ಗುಂಡೀ

ಶಿಸ್ತುಗಾರ ಶಿವಪ್ಪನಾಯ್ಕ ಕೆಳದಿಯ ನಗರ
ಚಿಕ್ಕದೇವ ದೊಡ್ದದೇವ ಮೈಸೂರಿನವರ
ಹಿಂದಕ್ಕಿಲ್ಲಿ ಬಂದಿದ್ರಂತೆ ಶ್ರೀರಾಮರ
ಎಲ್ಲ ಕಥೆ ಹೇಳುತದೆ ಕಲ್ಪಾಂತರ

ರಾಜಾ ರಾಕೆಟ್ ರೋರರ್ ಲೇಡಿ ಚತುರ್ಮುಖ
ಜೋಡಿಗೂಡಿ ಹಾಡುತಾವೆ ಹಿಂದಿನ ಸುಖ
ತಾನು ಬಿದ್ರೆ ಆದಿತೇಳು ತಾಯಿಗೆ ಬೆಳಕ
ಮುಂದಿನವರು ಕಂಡ್ರೆ ಸಾಕು ಸ್ವಂತ ಸುಖ

ಒಂದು ಎರಡು ಮೂರು ನಾಲ್ಕು ಆದಾವ್ ಮತ
ಹಿಂದಿನಿಂದ ಹರಿದು ಬಂದದ್ದೊಂದೇ ಮತ
ಗುಂಡಿ ಬಿದ್ದು ಹಾಳಾಗಲಿಕ್ಕೆ ಸಾವಿರ ಮತ
ಮುಂದೆ ಹೋಗಿ ಸೇರುವಲ್ಲಿಗೊಂದೇ ಮತ

ಶಹಾಜಹಾನ ತಾಜಮಹಲು ಕೊಹಿನೂರ್ ಮಣಿ
ಸಾವಿರಿದ್ರು ಸಲ್ಲವಿದಕೆ ಚೆಲುವಿನ ಕಣಿ
ಜೀವವಂತ ಶರಾವತಿಗಿನ್ನಾವ್ ದೆಣಿ
ಹೊಟ್ಟೆಕಿಚ್ಚಿಗಾಡಿಕೊಂಡ್ರೆ ಅದಕಾರ್ ಹೊಣಿ

ಶರಾವತಿ ಕನ್ನಡ ನಾಡ ಭಾಗೀರಥಿ
ಪುಣ್ಯವಂತ್ರು ಬರ್ತಾರಿಲ್ಲಿ ದಿನಂಪ್ರತೀ
ಸಾವು ನೋವು ಸುಳಿಯದಿಲ್ಲಿಯ ಕರಾಮತಿ
ಮಲ್ಲೇಶನ ನೆನೆಯುತಿದ್ರೆ ಜೀವನ್ಮುಕ್ತಿ.

#ಮೂಗೂರು_ಮಲ್ಲಪ್ಪ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...