Skip to main content

Blog number 3406. ಶ್ರೀ 108 ಕುಂತು ಸಾಗರ ಮಹಾರಾಜರು ಕೊಲಾಪುರ

#ಆಚಾರ್ಯಶ್ರೀ108_ಶ್ರೀಕುಂತುಸಾಗರಜೀ_ಮಹಾರಾಜರ

#ಪುಣ್ಯಚರಣ_ಸ್ಪರ್ಶದ_ಬಾಗ್ಯ_ನಮ್ಮ_ಸಂಸ್ಥೆಗೆ

#ನನ್ನ_ಪೂರ್ವ_ಜನ್ಮದ_ಪುಣ್ಯದ_ಫಲ_ಈ_ಸತ್ಸಂಗಳು

ದೇಶದ ಅಗ್ರಗಣ್ಯ ಆಚಾರ್ಯ ಶ್ರೀ 108 ಶ್ರೀ ಕುಂತು ಸಾಗರಜಿ ಜೈನ ಮುನಿ ಮಹಾರಾಜರನ್ನ ದರ್ಶನ ಮಾಡುವ ಸದಾವಕಾಶ ನಾಳೆ ಸಾಗರದ ಭಕ್ತವೃಂದಕ್ಕೆ ಸಿಗಲಿದೆ ಈ ಸುವರ್ಣಾವಕಾಶ ಕಳೆದು ಕೊಳ್ಳಬಾರದು.

https://youtu.be/Jrkz48Bo634?si=YhkDb8X_5Z77FdQQ

#jainism #kunthusagarji #kunthugirikshetra #munimaharaj #sudeerpatil #Humcha 

  ಭಾರತ ದೇಶದ ಜೈನ ಮುನಿಗಳಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದ ಕೊಲ್ಲಾಪುರ ಸಮೀಪದ ಕುಂತು ಗಿರಿ ಕ್ಷೇತ್ರದ ಆಚಾರ್ಯ ಶ್ರೀ 108 ಶ್ರೀ ಕುಂತು ಸಾಗರ ಜಿ ಮಹಾರಾಜರು ಇವತ್ತು ತಮ್ಮ ಪರ್ಯಟನೆಯಲ್ಲಿ ಹುಂಚಾದಿಂದ ಸಾಗರ ಮಾರ್ಗವಾಗಿ ಸಂಚರಿಸುವಾಗ ತಮ್ಮ ಆಹಾರ ಸೇವನೆಗಾಗಿ ನಮ್ಮ ಶ್ರೀ ಕೃಷ್ಣ ಸರಸ ಕನ್ವೆನ್ಷನ್ ಹಾಲ್ ಬಂದಿದ್ದರು.

  ಕುಂತುಗಿರಿ ಕ್ಷೇತ್ರ ಮಹಾರಾಷ್ಟ್ರದ ಕೊಲ್ಲಾಪುರದಿಂದ ಸಾಂಗ್ಲಿ ಮಾರ್ಗವಾಗಿ 22 ಕಿ.ಮೀ ದೂರದಲ್ಲಿದೆ ಅಲ್ಲಿ 40 ಎಕರೆ ಪ್ರದೇಶದಲ್ಲಿ ಕುಂತುಗಿರಿ ಕ್ಷೇತ್ರ ಇದೆ ಇದರ ಸ್ಥಾಪಕರು ಆಚಾರ್ಯ ಶ್ರೀ 108 ಶ್ರೀ ಕುಂತು ಸಾಗರ್ ಜಿ.

ಒಂದು ವಿಶೇಷವೆಂದರೆ 1961- 62 ರಲ್ಲಿ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕಕ್ಕಾಗಿ ಇವರು ತಮ್ಮ ಗುರು ಮಹಾವೀರ ಕೀರ್ತಿ ಮಹಾರಾಜರ ಜೊತೆ ಬಂದವರು ವಾಪಸು ಹೋಗುವಾಗ ಹುಂಚಾದ ಶ್ರೀ ಪದ್ಮಾವತಿ ಕ್ಷೇತ್ರಕ್ಕೆ ಬಂದಾಗ ಅವರ ಗುರುಗಳಿಂದ ಇವರಿಗೆ ದೀಕ್ಷೆ ಆಯಿತು ಆದ್ದರಿಂದ ಶಿವಮೊಗ್ಗ ಜಿಲ್ಲೆಯ ನಮ್ಮ ಹುಂಚ ಕ್ಷೇತ್ರಕ್ಕೂ ಮಹಾರಾಷ್ಟ್ರದ ಕುಂತುಗಿರಿ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ ಉಂಟಾಯಿತು.

  ಇನ್ನೊಂದು ವಿಶೇಷವೆಂದರೆ ಕುಂತುಗಿರಿ ಕ್ಷೇತ್ರದ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಸುಧೀರ್ ಪಾಟೀಲ್ ಮತ್ತು ನನ್ನ ಗೆಳೆತನ 15 ವರ್ಷಕ್ಕೂ ಹಿಂದಿನದು ಅವರು ಈಗ ಆಚಾರ್ಯ ಶ್ರೀ 108 ಶ್ರೀ ಕುಂತು ಸಾಗರ್ ಜೊತೆಗೆ ಪರ್ಯಟನೆಯಲ್ಲಿದ್ದಾರೆ.

  ಇವತ್ತು ಈ ಮಹಾಸಂತರ ದರ್ಶನ ಸತ್ಸಂಗ ಮತ್ತು ಅವರಿಂದ ಆಶೀರ್ವಾದ ಪಡೆಯುವ ಭಾಗ್ಯ ನನ್ನದಾಯಿತು ಶ್ರೀ ಕುಂತು ಸಾಗರ್ ಜಿ ನಮ್ಮ ಜಾಗಕ್ಕೆ ಪುಣ್ಯಭೂಮಿ ಎಂದು ಕರೆದರು ಸಾಧು ಸಂತರ ಪಾದಸ್ಪರ್ಷ ಆಗುವ ನೆಲ ಸಾಮಾನ್ಯದಲ್ಲ ಎಂದರು.

  ಹೌದು ಇದೆಲ್ಲ ನನ್ನ ಜೀವನದಲ್ಲಿ ಸಾಧ್ಯವಾಗುತ್ತಿರುವುದು ನನ್ನ ಮಾತಾ ಪಿತೃಗಳ ನಮ್ಮ ಪೂರ್ವಿಕರ ಪುಣ್ಯಗಳಿಂದ ಎಂದು ನನ್ನ ಭಾವನೆ ಮತ್ತು ನಂಬಿಕೆ ಆಗಿದೆ.

   ದೇಶದ ಅಗ್ರಗಣ್ಯ ಆಚಾರ್ಯ ಶ್ರೀ 108 ಶ್ರೀ ಕುಂತು ಸಾಗರಜಿ ಜೈನ ಮುನಿ ಮಹಾರಾಜರನ್ನ ದರ್ಶನ ಮಾಡುವ ಸದಾವಕಾಶ ನಾಳೆ ಸಾಗರದ ಭಕ್ತವೃಂದಕ್ಕೆ ಸಿಗಲಿದೆ ಈ ಸುವರ್ಣಾವಕಾಶ ಕಳೆದು ಕೊಳ್ಳ ಬಾರದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...