Skip to main content

3453. ಶ್ರೀಕಂಠ ಕೂಡಿಗೆ 78 ರ ಸಂಭ್ರಮ

#ಶ್ರೀಕಂಠ_ಕೂಡಿಗೆಗೆ_78ರ_ಸಂಭ್ರಮ.

#ಡಾ_ಶ್ರೀಕಂಠಕೂಡಿಗೆ_ಅವರಿಗೆ_ಹುಟ್ಟು_ಹಬ್ಬದ_ಶುಭಾಶಯಗಳು

#ಅವರು_ಹುಟ್ಟಿದ_ದಿನಾಂಕ_5_ಸೆಪ್ಟೆಂಬರ್_1947.

#ಶಿವಮೊಗ್ಗ_ಜಿಲ್ಲೆಯ_ತೀರ್ಥಹಳ್ಳಿಯ_ಕೂಡಿಗೆ_ಊರಿನವರು.

#ಪದವಿ_ವಿದ್ಯಾರ್ಥಿಗಳಿಗೆ_ಕೂಡಿಗೆ_ಅವರ_ಪಾಠಗಳಿತ್ತು.

#ಕುವೆಂಪು_ವಿಶ್ವವಿದ್ಯಾಲಯ_ಶಿವಮೊಗ್ಗ_ಜಿಲ್ಲೆಗೆ_ತಂದವರು.

#ಆದರೆ_ಕುವೆಂಪು_ವಿವಿ_ಕುಲಪತಿ_ಆಗುವ_ಆರ್ಹತೆ_ಇದ್ದರೂ_ಕುಲಪತಿ_ಮಾಡಲಿಲ್ಲ.

#ವಾಮನವತಾರಿಯ_ಹಿನ್ನೆಲೆ_ನೋಡಿದರೆ_ವಿಶ್ವದರ್ಶನ

#ಅವರಿಗೆ_78ನೇ_ಹುಟ್ಟು_ಹಬ್ಬದ_ಶುಭಾಷಯಗಳನ್ನು_ಹೇಳೋಣ.


#srikantakudige #Shivamogga #kuvempuvv  #kannadasahityparishath #poetryislife 

  ಡಾಕ್ಟರ್ ಶ್ರೀಕಂಠ ಕೂಡಿಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೂಡಿಗೆ ಊರಿನವರು.

ಡಾ. ಶ್ರೀಕಂಠ ಕೂಡಿಗೆ ಜನ್ಮ ದಿನ 5- ಸೆಪ್ಟೆಂಬರ್ -1947,
 ಜಾನಪದ, ಸಂಶೋಧನೆ, ವಿಮರ್ಶಾ ಕ್ಷೇತ್ರದಲ್ಲಿ ಪ್ರಮುಖರಾಗಿರುವ ಶ್ರೀಕಂಠ ಕೂಡಿಗೆಯವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೂಡಿಗೆ ಎಂಬ ಹಳ್ಳಿಯಲ್ಲಿ ತಂದೆ ಕೃಷ್ಣಯ್ಯ ಗೌಡ, ತಾಯಿ ಚಿನ್ನಮ್ಮ.

   ಪ್ರಾಥಮಿಕ ಶಾಲೆ ಹುಟ್ಟಿದೂರಿನಲ್ಲಿ, ಮಾಧ್ಯಮಿಕ ಶಾಲೆ ಓದಿದ್ದು ತೂದೂರು ಕಟ್ಟೆ, ಪ್ರೌಢಶಾಲೆಗೆ ಸೇರಿದ್ದು ತೀರ್ಥಹಳ್ಳಿಯಲ್ಲಿ. 

   ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ತರಗತಿಯಲ್ಲಿ ಚಿನ್ನದ ಪದಕದೊಡನೆ ಪ್ರಥಮ ರ‍್ಯಾಂಕ್ ವಿಜೇತರು.

   ಮೈಸೂರು ವಿಶ್ವವಿದ್ಯಾಲಯದ ಕನ್ನಡ ಎಂ.ಎ, ಪಿ ಹೆಚ್ ಡಿ ಪದವೀದರರು, ಚಿನ್ನದ ಪದಕ ವಿಜೇತರರು ಶ್ರೀಯುತರು ಉತ್ತಮ ಪ್ರಾಧ್ಯಾಪಕರು, ಸೃಜನಶೀಲ ಲೇಖಕರು ಮತ್ತು ಪ್ರಸಿದ್ಧ ಜನಪದ ತಜ್ಞರು.

  ಕುವೆಂಪು ವಿಶ್ವವಿದ್ಯಾಲಯ ಶಿವಮೊಗ್ಗ ಜಿಲ್ಲೆಗೆ ತರಲು ಇವರ ವಿಶೇಷ ಪ್ರಯತ್ನವಿದೆ ನಂತರ ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಆಗೇ ಬಿಟ್ಟರು ಎಂಬ ಸುದ್ದಿ ಇತ್ತು ಆದರೆ ಜೆಲ್ಲೆಯ ರಾಜಕಾರಣಿಗಳು ಈ ಹುದ್ದೆಯನ್ನೆ ಮಾರಿಕೊಂಡರು.

    ಈ ವಿಚಾರದಲ್ಲಿ ಶ್ರೀಕಂಠ ಕೂಡಿಗೆಯವರನ್ನು ಗೌರವದಿಂದ ನಡೆಸಿಕೊಳ್ಳಲಿಲ್ಲ, ಅವರ ಪ್ರತಿಭೆಗೆ, ಅವರು ಕುವೆಂಪು ವಿಶ್ವವಿದ್ಯಾಲಯ ಸ್ಥಾಪನೆಗೆ ಅವರು ಪಟ್ಟ ಶ್ರಮಕ್ಕೆ ಮತ್ತು ಶಿವಮೊಗ್ಗ ಜಿಲ್ಲೆಯವರೇ ಎಂಬುದಕ್ಕೆ ಮಾನ್ಯತೆ ನೀಡದ ನೋವು ಶ್ರೀಕಂಠ ಕೂಡಿಗೆ ಆಪ್ತರಲ್ಲಿ ಈಗಲೂ ಇದೆ.

   ಶ್ರೀಕಂಠ ಕೂಡಿಗೆ ಅವರ ಹಸ್ತಾಕ್ಷರ ಮುತ್ತುಗಳನ್ನು ಜೋಡಿಸಿದಂತೆ ಅತಿ ಸುಂದರ, ಅನೇಕ ರಾಜ್ಯ ಮಟ್ಟದ ಪ್ರಶಸ್ತಿ ಇವರ ಕನ್ನಡ ಹಸ್ತಾಕ್ಷರಕ್ಕೆ ದೊರಕಿದೆ.

   ಪದವಿ ವಿದ್ಯಾರ್ಥಿಗಳಿಗೆ ಇವರು ಬರೆದ ಅನೇಕ ಪಠ್ಯಗಳು ಪ್ರಸಿದ್ಧಿ ಪಡೆದಿತ್ತು, ಕುವೆಂಪು ವಿವಿ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳಿಗೆ, ಪ್ರಾಧ್ಯಾಪಕರಿಗೆ ಮತ್ತು ನೌಕರರ ವೃಂದಕ್ಕೆ ಇವರು ಚಿರಪರಿಚಿತರು.

   ಕುವೆಂಪು ವಿವಿಯ ಕನ್ನಡ ಅಧ್ಯಯನ ಸಂಸ್ಥೆ ಮತ್ತು ಪ್ರಸಾರಂಗದ ನಿದೇ೯ಶಕರಾಗಿ, ಸೆನೆಟ್ - ಸಿಂಡಿಕೇಟ್ - ಶಿಕ್ಷಣ ಮಂಡಳಿ ಸದಸ್ಯರಾಗಿ, ಡೀನ್ ಆಗಿ ಪರಿಕ್ಷಾಂಗದ ಕುಲ ಸಚಿವರಾಗಿದ್ದರು.

  ಕನಾ೯ಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ರಾಜ್ಯ ಜಾನಪದ ಯಕ್ಷಗಾನ ಅಕಾಡೆಮಿ ನಿದೇ೯ಶಕರಾಗಿ, ಹಂಪಿ ಕನ್ನಡ ವಿವಿಯ ಆಡಳಿತ ಮಂಡಳಿ ಸದಸ್ಯರಾಗಿದ್ದರು.

  UGC/NET ಪರೀಕ್ಷಾ ಮಂಡಳಿ ಸದಸ್ಯರಾಗಿ, ದೆಹಲಿ ನ್ಯಾಷನಲ್ ಬುಕ್ ಟ್ರಸ್ಟ್ ಸದಸ್ಯರಾಗಿ, UPSC ಕನ್ನಡ ಪಠ್ಯ ರಚನಾ ಮಂಡಳಿ ಸದಸ್ಯರಾಗಿ, ಕೇಂದ್ರ ಸಾಹಿತ್ಯ ಅಕಾಡಮಿ ಸದಸ್ಯರೂ ಆಗಿದ್ದರು.

   ಕನ್ನಡ ಲಾವಣಿ ಮೇಲೆ ಪಿ .ಹೆಚ್.ಡಿ ಮಾಡಿದ್ದಾರೆ, 15 ಜನ ಎಂಪಿಲ್ ವಿದ್ಯಾರ್ಥಿಗಳಿಗೆ, 25 ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.

   ಇವರ ವಿದ್ಯಾರ್ಥಿಗಳು ಮತ್ತು ಶಿಷ್ಯರು ಸೇರಿ ಬೇರೆ ಬೇರೆ ಸಂದರ್ಭದಲ್ಲಿ ಇವರಿಗಾಗಿ ಎರೆಡು ಅಭಿನಂದನಾ ಗ್ರಂಥ ಇವರಿಗೆ ಸಮರ್ಪಿಸಿದ್ದಾರೆ (ಕೂಡಿಗೆ ಮತ್ತು ಆರು ಮುನಿಸು).

  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಾಹಿತ್ಯ ಅಕಾಡಮಿ ಗೌರವ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಜಾನಪದ ತಜ್ಞ ಪ್ರಶಸ್ತಿ ಜೊತೆ ಅಸಂಖ್ಯಾತ ಸಂಘ ಸಂಸ್ಥೆಗಳು ರಾಜ್ಯದಾದ್ಯಂತ ಇವರಿಗೆ ನೀಡಿದ ಪ್ರಶಸ್ತಿಗಳ ದೊಡ್ಡ ಪಟ್ಟಿಯೇ ಇದೆ.

   ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ತೀರ್ಥಹಳ್ಳಿಯಲ್ಲಿ ನಡೆದ ತಾಲ್ಲೂಕ್ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಶಸ್ಸಿಗೆ ಕಾರಣರಾಗಿದ್ದರು.

  ಬೆಳಗಾವಿಯ VTU ಪ್ರಸಾರಾಂಗದ ಸಲಹಾ ಮಂಡಳಿ ಸದಸ್ಯರಾಗಿ, ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಮಂಡಳಿ ಅಧ್ಯಕ್ಷರೂ ಆಗಿದ್ದರು.

   ಕುವೆಂಪು ವಿಶ್ವವಿದ್ಯಾಲಯದ ಎಂಟು ಪದವಿ ಕನ್ನಡ ಪುಸ್ತಕಗಳಿಗೆ ಪ್ರದಾನ ಸಂಪಾದಕರೂ ಆಗಿದ್ದರು.

  ಇನ್ನೂ ಬರೆದರೆ ಇನ್ನೂ ಕೆಲವು ಪುಟಗಳಾಗುವ ಇವರ ಸಾದನೆ ಇಲ್ಲಿಗೆ ಸಂಕ್ಷಿಪ್ತಗೊಳಿಸಿದ್ದೇನೆ ಮತ್ತು ಇಷ್ಟೆಲ್ಲಾ ಸಾದನೆಯ ಶ್ರೀಕಂಠ ಕೊಡಿಗೆ ಶಿವಮೊಗ್ಗ ಜಿಲ್ಲೆಯವರೆಂಬುದು ನನಗೆ ಹೆಮ್ಮೆ ಕೂಡ.

  ಪ್ರತಿಬೆ - ಅರ್ಹತೆ-ಯೋಗ್ಯತೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೇರುಸ್ಥಾನದಲ್ಲಿರುವ 78ನೇ ಹುಟ್ಟುಹಬ್ಬ ಆಚರಿಸುತ್ತಿರುವ ಆತ್ಮೀಯ ಶ್ರೀಕಂಠ ಕೂಡಿಗೆ ಅವರಿಗೆ ಶುಭ ಹಾರೈಕೆಗಳನ್ನು ಹಾರೈಸುತ್ತೇನೆ ಮತ್ತು ದೇವರು ಅವರಿಗೆ ಆರೋಗ್ಯ ಆಯಸ್ಸು ದಯಪಾಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

   ನೀವೂ ಈ ಮಹನೀಯರಿಗೆ ಹುಟ್ಟು ಹಬ್ಬದ ಶುಭಾಶಯ ಸಂದೇಶಗಳನ್ನ ಕಾಮೆಂಟ್ ನಲ್ಲಿರುವ ಅವರ ಸೆಲ್ ಫೋನ್ ನಂಬರ್   ಕಳಿಸಬಹುದಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...