Skip to main content

Blog 3579. ತುಂಬೆ ಹೂವು

#ತುಂಬೆ_ಗಿಡದಲ್ಲಿ

#ತುಂಬೆ_ಹೂವು_ಅರಳುವ_ಕಾಲ

#ಶಿವರಾತ್ರಿಗೆ_ಶಿವನ_ಶಿರದ_ಮೇಲೆ_ತುಂಬೆ_ಹೂವು_ಮುಡಿಸುತ್ತಾರೆ.

#ಶಿವನಿಗೆ_ಪ್ರಿಯವಾದ_ಸಸ್ಯ_ತುಂಬೆ.

#ಶಿವನ_ದೇಹದ_ವಿಷ_ಶಮನ_ಮಾಡಲು_ಬಳಸಿದ_ಸಸ್ಯವಾದ್ದರಿಂದ

#ತುಂಬೆಗೆ_ರುದ್ರ_ಪುಷ್ಪಾ_ಎಂಬ_ಹೆಸರೂ_ಇದೆ.


#Thumba #Leucasaspera #Dronapushpa #Commonleucas #MahaShivaratri #Rudrapushpa 

 ಮಹಾ ಶಿವರಾತ್ರಿ ಇದೇ ಫೆಬ್ರುವರಿ 15 ರಂದು ಆಚರಿಸಲಾಗುತ್ತದೆ.

    ಶಿವನಿಗೆ ಪ್ರಿಯವಾದ ಹೂವು ತುಂಬೆ ಹೂವು ಈ ಕಾಲದಲ್ಲಿ ಅರಳಿದೆ ಇದಕ್ಕೆ ರುದ್ರ ಪುಷ್ಪಾ ಎಂಬ ಹೆಸರೂ ಇದೆ.

    ನನ್ನ ಮತ್ತು ಶಂಭೂರಾಮನ ವಾಕಿಂಗ್ ಪಾತ್ ನಲ್ಲಿರುವ ಗಾರ್ಡನ್ ನ ಕೆಲ ಹೂಕುಂಡದಲ್ಲಿ ತುಂಬೆ ಗಿಡಗಳು ಬಿಳಿಯ ತುಂಬೆ ಹೂವು ನಿತ್ಯ ಸೂರ್ಯೋದಯದಲ್ಲಿ ಅರಳುಸುತ್ತಿದೆ.

   ತುಂಬೆ ಹೂವನ್ನು ಇಂಗ್ಲಿಷ್‌ನಲ್ಲಿ Leucas aspera (ಲ್ಯೂಕಾಸ್ ಆಸ್ಪೆರಾ) ಅಥವಾ Thumba Flower ಎಂದು ಕರೆಯುತ್ತಾರೆ.

   ಇದು ಸಾಮಾನ್ಯವಾಗಿ ಬಿಳಿ ಬಣ್ಣದ, ಸಣ್ಣ ಗಂಟೆಯಾಕಾರದ ಹೂವುಗಳನ್ನು ಬಿಡುವ ಮೂಲಿಕೆ ಸಸ್ಯವಾಗಿದೆ..

   ಸಂಸ್ಕೃತದಲ್ಲಿ ದ್ರೋಣ ಪುಷ್ಪಂ ಎನ್ನುತ್ತಾರೆ,ಸಾಂಪ್ರದಾಯಿಕ ಆಯುರ್ವೇದ ವೈದ್ಯಕೀಯದಲ್ಲಿ ಜ್ವರ, ಕೆಮ್ಮು ಮತ್ತು ಶೀತದ ಚಿಕಿತ್ಸೆಗಾಗಿ ಬಳಸಲಾಗುತ್ತದೆ. 

  ಇದು ಭಾರತದಾದ್ಯಂತ ಹೆಚ್ಚಾಗಿ ಕಳೆ ಸಸ್ಯವಾಗಿ ಕಂಡುಬರುತ್ತದೆ.

   ತುಂಬೆ ಹೂವು ಶಿವನಿಗೆ ಪ್ರಿಯವಾದ, ಸಾಂಪ್ರದಾಯಿಕವಾಗಿ ರುದ್ರಪುಷ್ಪ ಎಂದು ಕರೆಯಲ್ಪಡುವ ಪವಿತ್ರ ಸಸ್ಯ. 

  ಇದು ಕೇವಲ ಧಾರ್ಮಿಕ ಮಹತ್ವವಲ್ಲದೆ, ಜ್ವರ, ಕೆಮ್ಮು, ಚರ್ಮದ ತುರಿಕೆ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳಿಗೆ ಅತ್ಯುತ್ತಮ ಆಯುರ್ವೇದ ಮನೆಮದ್ದಾಗಿದೆ.

   ಇದರ ರಸ ಮತ್ತು ಎಲೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಕೀಟನಾಶಕ ಗುಣಗಳನ್ನು ಹೊಂದಿವೆ. 

    ಶಿವನ ಪೂಜೆಯಲ್ಲಿ ತುಂಬೆ ಹೂವಿಗೆ ವಿಶೇಷ ಸ್ಥಾನವಿದೆ, ಶಿವನ ದೇಹದಲ್ಲಿನ ವಿಷವನ್ನು ಕಡಿಮೆ ಮಾಡಲು ಬಳಸಲಾದ ಸಸ್ಯವೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ ಆದ್ದರಿಂದ ಇದನ್ನು #ರುದ್ರಪುಷ್ಪ ಎಂದು ಕರೆಯುತ್ತಾರೆ.

  ತುಂಬೆ ಗಿಡವು ಶಿವನಿಗೆ ಅತ್ಯಂತ ಪ್ರಿಯವಾದ ಸಸ್ಯವಾಗಿದ್ದು ಅದರ ಬಿಳಿ ಹೂವುಗಳನ್ನು ಸೋಮವಾರ ಅಥವಾ ಶಿವರಾತ್ರಿಯಂದು ಶಿವಲಿಂಗಕ್ಕೆ ಅರ್ಪಿಸುವುದರಿಂದ ಸಕಲ ಸಂಕಷ್ಟಗಳು ದೂರವಾಗಿ, ಧನ ಲಾಭವಾಗುತ್ತದೆ ಎಂಬ ನಂಬಿಕೆ ಇದೆ. 

  ಈ ಹೂವನ್ನು ಶಿವನ ತಲೆಯ ಮೇಲೆ ಮಾತ್ರ ಇಡಬೇಕು, ಪಾದಗಳ ಮೇಲೆ ಅಲ್ಲ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...