Skip to main content

Blog 3583. ಯೆನೆಪೋಯ ಆಸ್ಪತ್ರೆ

#ಯೆನೆಪೋಯ_ವಿಶ್ವವಿದ್ಯಾಲಯ

#ಮಂಗಳೂರಿನ_ಯೆನೆಪೋಯ_ಆಸ್ಪತ್ರೆ

#ನಮ್ಮ_ರಾಜ್ಯ_ಮಾತ್ರವಲ್ಲ_ಕೇರಳ_ರಾಜ್ಯದಲ್ಲೂ_ಪ್ರಸಿದ್ಧಿ_ಪಡೆದಿದೆ.


#Mangalore #yenopoya #Hospital #karnataka #kerala #University  #yenepoyauniversity #yenepoyahospital #Mangalore #medicaleducation #nursingschool 

ಇದನ್ನು 2008 ರಲ್ಲಿ ಯೆನೆಪೋಯ ವಿಶ್ವವಿದ್ಯಾಲಯವಾಗಿ ಸ್ಥಾಪಿಸಲಾಯಿತು.

 1992 ರಲ್ಲಿ ಯೆನೆಪೋಯ ದಂತ ಕಾಲೇಜು ಪ್ರಾರಂಭವಾದಾಗಿನಿಂದ ಅನೇಕ ಕಾಲೇಜುಗಳು ಸರಣಿಯಲ್ಲಿ ಪ್ರಾರಂಭವಾದವು. 

 ವಿಶ್ವವಿದ್ಯಾನಿಲಯವು ವೈದ್ಯಕೀಯ, ದಂತ, ಸಂಬಂಧಿತ ಆರೋಗ್ಯ ವಿಜ್ಞಾನಗಳು, ಭೌತಚಿಕಿತ್ಸೆ, ಫಾರ್ಮಸಿ, ನರ್ಸಿಂಗ್ , ಆಯುರ್ವೇದ, ಹೋಮಿಯೋಪತಿ, ಪ್ರಕೃತಿ ಚಿಕಿತ್ಸೆ, ಎಂಜಿನಿಯರಿಂಗ್ ಮತ್ತು ಕಲೆ, ವಿಜ್ಞಾನ, ವಾಣಿಜ್ಯ ಮತ್ತು ನಿರ್ವಹಣೆಗಾಗಿ ವಿವಿಧ ಘಟಕ ಕಾಲೇಜುಗಳನ್ನು ಹೊಂದಿದೆ.

    ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ತಲುಪಲು ರೋಗಿಗಳಿಗೋಸ್ಕರ ರಾಜ್ಯ ಸಾರಿಗೆ  ಬಸ್ಸುಗಳನ್ನು ಕೂಡ ಬಿಡಲಾಗಿದೆ ಅಂದರೆ ಈ ಯೆನೆಪೋಯ ಆಸ್ಪತ್ರೆ ಎಷ್ಟು ಪ್ರಸಿದ್ಧಿ ಪಡೆದಿದೆ ಎಂದು ಅರ್ಥವಾದೀತು.

 ಯೆನೆಪೋಯ ಆಸ್ಪತ್ರೆಯ ಹಾಲಿ ಚೇರ್ಮನ್ ಶ್ರೀಯೆನೆಪೋಯ ಅಬ್ದುಲ್ ಕುಂಜ್ಞ ಇವರು ಜನಿಸಿದ್ದು 1947 ರಲ್ಲಿ.

  ಇವರ ವಿದ್ಯಾಭ್ಯಾಸ ಮೈಸೂರು ಯುನಿವರ್ಸಿಟಿಯಲ್ಲಿ ಬಿಎ, 1992 ರಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.

  ಇವರ ತಂದೆ ಯೆನೆಪೋಯ ಮೊಯಿದ್ದೀನ್ ಕುಂಜಿ 1940ರಲ್ಲಿ ಪ್ರಾರಂಭಿಸಿದ ಈ ಸಂಸ್ಥೆಗಳು 85 ವರ್ಷದಲ್ಲಿ ದೊಡ್ಡ ಸಂಸ್ಥೆಯಾಗಿ ಬೆಳೆದಿದೆ.
  
   3000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ, ಯೆನೆಪೋಯಾ ಮೊಯಿದೀನ್ ಕುಂಜಿ ವಿದ್ಯಾವಂತರಲ್ಲ ಆದರೆ ಅವರ ದೂರ ದೃಷ್ಟಿ ಯಾವ ವಿದ್ಯಾವಂತರೂ ಸಾದಿಸಲು ಸಾಧ್ಯವಿಲ್ಲದಂತೆ ಸಾದಿಸಿ ತೋರಿಸಿದ್ದಾರೆ.

  ಸಣ್ಣ ಮರದ ವಹಿವಾಟಿನಿಂದ  1940ರಲ್ಲಿ ಯೆನೆಪೋಯ ಸಂಸ್ಥೆ ಕಾರ್ಯಾರಂಭ ಮಾಡಲು ಪ್ರಾರಂಭಿಸಿತು.

 ನಂತರ ಟ್ರಾನ್ಸ್ಪೋರ್ಟ್, ಆಸ್ಪತ್ರೆ, ಗಣಿಗಾರಿಕೆ, ವಿದ್ಯಾ ಕ್ಷೇತ್ರ,ರಿಯಲ್ ಎಸ್ಟೇಟ್ ಮತ್ತು  ವ್ಯಾಪಾರ ಇತ್ಯಾದಿಗಳಲ್ಲಿ ತೊಡಗಿಸಿ ಕೊಂಡಿತು.

  ಕೆನರಾ ವುಡ್ಸ್ ಅಂಡ್ ಪ್ಲೇವುಡ್, ಯೆನೆಪೋಯ ಸಾಮಿಲ್, ಯೆನೆಪೋಯ ಮಿನರಲ್ಸ್ ಅಂಡ್ ಗ್ರಾನೈಟ್, ಯೆನೆಪೋಯ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್, ಯೆನೆಪೋಯ ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್,
ಯೆನೆಪೋಯ ನರ್ಸಿಂಗ್ ಕಾಲೇಜು,
ಯೆನೆಪೋಯ ಮೊಯಿದ್ದೀನ್ ಕುನ್ನಿ ಮೆಮೋರಿಯಲ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಬಡ ಮಕ್ಕಳ ವಿದ್ಯಾಭ್ಯಾಸ, ಅನಾಥಾಶ್ರಮಗಳು, ಸಾಮೂಹಿಕ ವಿವಾಹಗಳನ್ನ ಮತ್ತು  200 ಹಾಸಿಗೆ ಆಸ್ಪತ್ರೆ ನಡೆಸುತ್ತಿದೆ.

 ಪ್ರಚಾರಗಳಿಂದ,ಸನ್ಮಾನ ಮತ್ತು ಪ್ರಶಸ್ತಿಗಳಿಂದ ಸದಾ ಅಂತರ ಕಾಪಾಡಿಕೊಂಡು ಈ ದೊಡ್ಡ ಸಾಧನೆ ಮಾಡಿದ ಈ ಸಂಸ್ಥೆ ಸಮಾಜದ ಬಡವರ ಸೇವೆಯಲ್ಲಿ ಕೂಡ ಮಹತ್ತರ ಸಾಧನೆ ಮಾಡಿರುವುದು ಅತ್ಯಂತ ಪ್ರಶಂಸನೀಯ ಕೆಲಸವಾಗಿದೆ.

  ಆದ್ದರಿಂದಲೇ ಮಂಗಳೂರಿನ ಯೆನೆಪೋಯ ಸಂಸ್ಥೆ ರಾಜ್ಯದ ಪ್ರತಿಷ್ಟಿತ ಸಂಸ್ಥೆ ಆಗಿದೆ.
 
   ಯೆನೆಪೋಯ ವಿಶ್ವವಿದ್ಯಾಲಯವು ಭಾರತದ ಕರ್ನಾಟಕದ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಪೂರ್ಣ ಪ್ರಮಾಣದ ಖಾಸಗಿ ಉನ್ನತ ಶಿಕ್ಷಣ ವಿಶ್ವವಿದ್ಯಾಲಯವಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...