Skip to main content

3597. ಡಾಕ್ಟರ್ ಅಕ್ಷರ ನಿವಾಸಮ್ ಕೆ.ವಿ. ಸುಬ್ಬಣ್ಣ


#ಡಾಕ್ಟರ್_ಕೆ_ವಿ_ಅಕ್ಷರ

ಹೆಗ್ಗೋಡಿನ ನೀನಾಸಂ #ಕೆ_ವಿ_ಸುಬ್ಬಣ್ಣರ ಪುತ್ರ ಕೆ.ವಿ.ಅಕ್ಷರ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.

  ಇದು ನಮ್ಮ ಸಾಗರ ತಾಲೂಕಿಗೆ ಸಂದ ಗೌರವವಾಗಿದೆ.

  ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವ ಮೇ.6ರಂದು ಬುಧವಾರ ಬೆಳಿಗ್ಗೆ 10-30ಕ್ಕೆ ಶಂಕರಘಟ್ಟದ ವಿವಿಯ ಜ್ಞಾನಸಹ್ಯಾದ್ರಿ ಆವರಣದಲ್ಲಿ ನಡೆಯಲಿದೆ.

   ಈ ಸಮಾರಂಭದಲ್ಲಿಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಕುವೆಂಪು ವಿವಿ ಕುಲಪತಿ #ಪ್ರೊ_ಶರತ್_ಅನಂತಮೂರ್ತಿ ತಿಳಿಸಿದ್ದಾರೆ.

   ಖ್ಯಾತ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ #ಕೋಣಂದೂರು_ಲಿಂಗಪ್ಪ, ಹಿರಿಯ ರಂಗಕರ್ಮಿ ಮತ್ತು ನೀನಾಸಂ ನಿರ್ದೇಶಕ #ಕೆ_ವಿ_ಅಕ್ಷರ ಮತ್ತು ರಾಷ್ಟ್ರೀಯ ಮೌಲ್ಯ ಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ನ ಮಾಜಿ ನಿರ್ದೇಶಕ #ಪ್ರೊ_ಎಚ್_ಎ_ರಂಗನಾಥ್ ಅವರಿಗೆ ಕುವೆಂಪು ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟ ರೇಟ್ (ಡಿ. ಲಿಟ್) ಪದವಿ ನೀಡಿ ಗೌರವಿಸಲಿದೆ ಎಂದು ಘೋಷಿಸಿದ್ದಾರೆ.

  ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ರಂಗಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕೆ.ವಿ. ಅಕ್ಷರ ಅವರು ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕರು, ಖ್ಯಾತ ರಂಗ ನಿರ್ದೇಶಕರಾಗಿರುವ ಅವರು ಸೃಜನಶೀಲ ಸಾಹಿತಿ, ನಾಟಕ, ಕವನ, ಪ್ರಬಂಧಗಳನ್ನು ರಚಿಸಿದ್ದಾರೆ. 

 ಸಹ್ಯಾದ್ರಿಕಾಂಡ, ಚೂರಿಕಟ್ಟೆ (ನಾಟಕಗಳು), ಹದಿಹರೆಯದ ಹಾಡುಗಳು (ಕವನ ಸಂಕಲನ), ರಂಗಪ್ರಪಂಚ, ರಂಗಪ್ರಯೋಗ, ರಂಗ ಅನ್ವೇಷಣೆ, ರಂಗಭೂಮಿ- ಪೂರ್ವ ಪಶ್ಚಿಮ (ರಂಗಕೃತಿ), ಮಾವಿನ ಮರದಲ್ಲಿ ಬಾಳೆಹಣ್ಣು (ವಿಮರ್ಶೆ). ಕರ್ನಾಟಕ ನಾಟಕ ಅಕಾಡೆಮಿಯ ಫೆಲೋಶಿಪ್ (2000) ಲಭಿಸಿದೆ.

   ಕೆ.ವಿ. ಅಕ್ಷರ ಅವರು 24 ಏಪ್ರಿಲ್ 1960 ಜನಿಸಿದರು ಇವರ ತಂದೆ ಖ್ಯಾತ ರಂಗಕರ್ಮಿ ನೀನಾಸಂ ಕೆ.ವಿ.ಸುಬ್ಬಣ್ಣ, ತಾಯಿ ಶೈಲಜಾ.

ಪ್ರೌಢ ಶಿಕ್ಷಣವನ್ನು ಹೆಗ್ಗೋಡಿನಲ್ಲಿ ಪೂರೈಸಿ ಪದವಿ ಶಿಕ್ಷಣವನ್ನು ಎಲ್.ಎಲ್. ಬಿ ಮತ್ತು ಎಸ್ ಪಿ ಎಸ್ ಕಾಲೇಜು ಸಾಗರ ಮತ್ತು ರಂಗ ತರಬೇತಿಯನ್ನು ದೆಹಲಿಯಲ್ಲಿ ಪಡೆದುಕೊಂಡರು.

   ಎಂ.ಎ. ಡ್ರಾಮಾ ಬ್ರಿಟಿಷ್ ಕೌನ್ಸಿಲ್ ಸ್ಕಾಲರ್ಶಿಪ್ ಪಡೆದುಕೊಂಡಿದ್ದಾರೆ.

 ನೀನಾಸಂ ತಂಡದ ನಿರ್ದೇಶಕರಾಗಿ ತರಬೇತುದಾರರಾಗಿ ಆಡಳಿತ ಅಧಿಕಾರಿಯಾಗಿ ಅಕ್ಷರ ಪ್ರಕಾಶನದ ಮೂಲಕ ಮುದ್ರಣ ಕಾರ್ಯವನ್ನು ಆರಂಭಿಸಿದರು.

   ಐದು ನಾಟಕಗಳನ್ನು ಬರೆದಿದ್ದಾರೆ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ, ಮೂವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

   ಸಾಹಿತ್ಯ,ರಂಗಕಲೆ, ಸಿನೆಮಾ, ಸಂಸ್ಕೃತಿ ಹಾಗೇನೆ ಅನುವಾದ ಕಾರ್ಯ ಗಳನ್ನು ಸಹ ಮಾಡಿದ್ದಾರೆ.

  ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ,ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು
ರಂಗಮನೆ ಪ್ರಶಸ್ತಿಗಳು ಲಭಿಸಿದೆ.

ಕೆ.ವಿ. ಅಕ್ಷರ ಅವರ #ಪ್ರಕಟಿತ ಕೃತಿಗಳು
ವಿಶ್ವಾತ್ಮಕ ದೇಶ ಭಾಷೆ (೨೦೦೩)
ಮಾವಿನ ಮರದಲ್ಲಿ ಬಾಳೆಯ ಹಣ್ಣು (೨೦೦೨)
ರಂಗಭೂಮಿ ಪೂರ್ವ ಪಶ್ಚಿಮ
ಪ್ರತಿಭೆಯ ಒಂದು ಪ್ರವಾಹ.
ಭಾರತದ ಸಾಂಪ್ರದಾಯಿಕ ರಂಗಭೂಮಿಗೆ ಪಶ್ಚಿಮದ ಪ್ರತಿಕ್ರಿಯೆ
ಕನ್ನಡ ರಂಗಭೂಮಿಯ ಕನಸುಗಳು
ಹದಿಹರೆಯದ ಹಾಡುಗಳು
ರಂಗ ಪ್ರಪಂಚ
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು.

ಕೆ. ವಿ . ಅಕ್ಷರ #ನಿರ್ದೇಶನ ಮಾಡಿದ ನಾಟಕಗಳು
ಬೆಟ್ಟಕ್ಕೆ ಚಳಿಯಾದರೆ
ಗವರ್ಮೆಂಟ್ ಇನ್ಸ್ಪೆಕ್ಟರ್
3 ಕನಸಿನ ಸಂಗೀತ ನಾಟಕ
ತಾಯಿ
ಮಹಿಮಾಪುರ
ಆಲಿಬಾಬ
ನೀಲಿ ಕುದುರೆ
ಸಾಂಬಶಿವ ಪ್ರಹಸನ
ಆಷಾಢದ ಒಂದು ದಿನ
ಮ್ಯಾಕ್ ಬೆತ್
ತುಘಲಕ್
ತುಕ್ರನ ಕನಸು
ಸಂಗ್ಯಾ ಬಾಳ್ಯ
ಸ್ವಪ್ನ ನಾಟಕ
ಕಿರಗೂರಿನ ಗಯ್ಯಾಳಿಗಳು
ಶಹಜಹಾನ್
ಹೊಸ ಸಂಸಾರ
ಸಹ್ಯಾದ್ರಿ ಕಾಂಡ
ಅಹಲ್ಯೆ
ಸಕ್ಕರೆ ಗೊಂಬೆ
ಸಂಸನ ಕುರುಕ್ಷೇತ್ರ
ಮಂತ್ರ ಶಕ್ತಿ
ಚೂರಿ ಕಟ್ಟೆ ಅರ್ಥಾತ್ ಕಲ್ಯಾಣಪುರ
ನೂರ್ ಜಹಾನ್
ಅಮನಿ
ಸಂಸಾರದಲ್ಲಿ ಸನಿದಪ
ವೆನಿಸ್ಸಿನ ವ್ಯಾಪಾರ
ಭೂತ
ಪಾತರಗಿತ್ತಿ ಪಕ್ಕ
ಕರ್ಮ ವಿಕ್ರಮ
ಸ್ವಯಂವರ ಲೋಕ
ಲಹರಿ
ತಾಳಿ ಕಟ್ಟಿ ಕೊಳ್ಳಿನಿ
ಶಿಶಿರ ವಸಂತ
ನಮಗೂ ನಿಮಗೂ ಹರಿ ಉದಯದ ಬಾಗಿಲು ತೆರೆದವರೇ ಅಲ್ಲ
ಬಹು ಗಿರಿ
ಭಾರತ ಯಾತ್ರಾ
ಆಂಗ್ಲ ನೌಕಾ ಕ್ಯಾಪ್ಟನ್
ಗೂಡಿನ ಒಳಗೆ ಒಂದು ಅಕ್ಕಿ
ಹೇಗೆ ಬೇಕೋ ಹಾಗೆ
ಕವಿತೆ ಅಂದ್ರೆ ಏನ್ರೀ
ಸೇತು ಬಂಧನ
ಮಾಲತಿ ಮಾಧವ.

  ಹೆಗ್ಗೋಡಿನ ನಿನಾಸಂ ಕೆ.ವಿ. ಅಕ್ಷರ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿರುವ ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತು ಕೆ.ವಿ. ಅಕ್ಷರ ಅವರಿಗೆ ಅಭಿನಂದನೆಗಳು.

#kuvempuuniversity #shivamogga #ninasam 
#heggodu #sagar #kvsubbanna #KVAkshara 
#doctorate

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...