Skip to main content

4020.ಶಿವಮೊಗ್ಗ ಜಿಲ್ಲೆ ಕಾಂಗ್ರೇಸ್ ಪಕ್ಷ

 
ನೂತನ_ಮುಖ್ಯಮಂತ್ರಿ_ಡಿ_ಕೆ_ಶಿವಕುಮಾರ್_ಸರ್ಕಾರದಲ್ಲಿ_ಶಿವಮೊಗ್ಗ_ಜಿಲ್ಲೆಯ_ರಾಜಕಾರಣ.

ಆರ್. ಎಂ. ಮಂಜುನಾಥ ಗೌಡರು, ಎಂ.ಶ್ರೀಕಾಂತ್ ಮತ್ತು ಗೋಣಿಮಾಲತೇಶರಿಗೆ ಸೂಕ್ತ ಸ್ಥಾನಮಾನ ಲಭಿಸೀತೆ? ...

   #ಯಡ್ಯೂರಪ್ಪ ಅವರ ಸರ್ಕಾರ ಇದ್ದಾಗ ಶಿವಮೊಗ್ಗ ಜಿಲ್ಲೆಯಲ್ಲಿ ಅವರ ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿದ್ದರು.

   ಕಾಂಗ್ರೇಸ್ ಪಕ್ಷದಲ್ಲಿ ಅವರ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಒಬ್ಬರ ಕಾಲು ಒಬ್ಬರು ಎಳೆದು ಸರ್ಕಾರದಲ್ಲಿ ಯಾರೂ ಸೂಕ್ತ ಸ್ಥಾನಮಾನ ಪಡೆಯದಂತೆ ತಪ್ಪಿಸಲು ಹೋರಾಟಗಳೇ ನಡೆಯುತ್ತದೆ ಇದರಿಂದ ಪಕ್ಷದ ಸಂಘಟನೆಗೆ ಹೆಚ್ಚು ನಷ್ಟ ಉಂಟಾಗುತ್ತದೆ.

  ಉಪಮುಖ್ಯಮಂತ್ರಿ ಆಗಿದ್ದ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಈಗ ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ಏನೆಲ್ಲ ಬದಲಾಗ ಬಹುದು ಎಂಬ ಕುತೂಹಲ ಇದೆ.

   ಮೊದಲಿನಿಂದಲೂ ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿರುವ #ಆರ್_ಎಂ_ಮಂಜುನಾಥಗೌಡರು DCC ಬ್ಯಾಂಕ್ ಅಧ್ಯಕ್ಷರು ಮತ್ತು ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ.

   ಮುಂದೆ ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕು ಮತ್ತು ವಿಧಾನ ಪರಿಷತ್ ಸದಸ್ಯರಾಗಿ ಅವರನ್ನ ನೇಮಕ ಮಾಡ ಬೇಕು ಎಂದು ಅವರ ಅಭಿಮಾನಿಗಳು ಬಹಿರಂಗವಾಗಿ ಒತ್ತಾಯಿಸುತ್ತಿದ್ದಾರೆ.

    ಜಾತ್ಯಾತೀತ ಜನತಾದಳದ ಜಿಲ್ಲಾ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ನಗರ ಸಭೆಗಳಲ್ಲಿ ಪಕ್ಷಕ್ಕೆ ಅಧಿಕಾರ ದೊರೆಯುವಂತೆ ಮಾಡಿದ್ದ #ಎಂ_ಶ್ರೀಕಾಂತ್ ರನ್ನ ನಿಗಮ ಮಂಡಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಆಶ್ವಾಸನೆ ಮೇಲೆ ಕಾಂಗ್ರೇಸ್ ಪಕ್ಷಕ್ಕೆ ಸೇರಿಸಿಕೊಂಡು ಮೂರು ವರ್ಷ ಆಯಿತು.

    ಎಂ . ಶ್ರೀಕಾಂತರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡ ಬೇಕು ಮತ್ತು ಅವರ ಸಂಘಟನಾ ಚತುರತೆಗಾಗಿ ಅವರಿಗೆ ವಿದಾನ ಪರಿಷತ್ ಗೆ ನಾಮಕರಣ ಮಾಡಬೇಕೆಂಬ ಒತ್ತಾಯಕ್ಕೆ ಈ ಬಾರಿ ಫಲ ಸಿಗಬಹುದು ಎನ್ನುವ ನಂಬಿಕೆ ಅವರ ಅಭಿಮಾನಿಗಳಿದ್ದು.

   ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಯಡ್ಯೂರಪ್ಪರ ಅಧಿಕಾರ-ತಂತ್ರಗಾರಿಕೆಯ ರಾಜಕಾರಣದ ವಿರುದ್ಧ ಕಾಂಗ್ರೇಸ್ ಪಕ್ಷದ ಸಂಘಟನೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು ಆದರೆ ಬಂಗಾರಪ್ಪನವರು ಅವರ ಖಾಸಾ ಶಿಷ್ಯ #ಗೋಣಿಮಾಲತೇಶರಿಂದ ಅದನ್ನು ಸಾದಿಸಿದ್ದರು.

    2018ರಲ್ಲಿ ಯಡ್ಯೂರಪ್ಪರ ವಿರುದ್ಧ ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆಗಿ ಗಣನೀಯ ಮತ ಪಡೆದವರು ಗೋಣಿ ಮಾಲತೇಶರು .

  2023ರಲ್ಲಿ ಶಿಕಾರಿಪುರದಿಂದ ಬಿಜೆಪಿಯಿಂದ ಸ್ಪರ್ಧೆ ಮಾಡಿದವರು ಯಡೂರಪ್ಪರ ಪುತ್ರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಆಗಲೂ ಕಾಂಗ್ರೇಸ್ ಅಭ್ಯರ್ಥಿ ಗೋಣಿ ಮಾಲತೇಶರು ಇವರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ಅಥವ ವಿಧಾನ ಪರಿಷತ್ ಸದಸ್ಯರಾಗಿ ನೇಮಿಸಿ ಯಡ್ಯೂರಪ್ಪರ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಸಂಘಟನೆ ಬಲ ಪಡಿಸ ಬೇಕೆಂಬ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಆಸೆ ಈವರೆಗೆ ಈಡೇರಿಲ್ಲ ಈ ಬಾರಿ ಡಿಕೆ ಶಿವಕುಮಾರ್ ಶಿಕಾರಿಪುರದ ಕಾಂಗ್ರೇಸ್ ಕಾರ್ಯಕರ್ತರ ಆಸೆ ಈಡೇರಿಸುತ್ತಾರಾ ಎಂದು ಕಾದು ನೋಡಬೇಕು.

   #CongressParty #DKShivakumar #DKSuresh 
#shikaripura #shivamogga #thirthahalli

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...