Skip to main content

4136.ವ್ಯಾಟಿಕನ್_ಟು_ಸಾಗರಜೋಸ್_ಪಾದರ್_ಕನ್ನಡಾಭಿಮಾನಕನ್ನಡ_ಕಲಿತ_ಪಾದ್ರಿಗಳು


ವ್ಯಾಟಿಕನ್_ಟು_ಸಾಗರ
ಜೋಸ್_ಪಾದರ್_ಕನ್ನಡಾಭಿಮಾನ
ಕನ್ನಡ_ಕಲಿತ_ಪಾದ್ರಿಗಳು

  ಡಾಕ್ಟರ್ ಪಿ.ವಿ. ಜೋಸೆಪ್ ಅವರನ್ನ ಇಲ್ಲಿಯವರು ಕರೆಯುವುದು ಜೋಸ್ ಪಾದರ್ ಅಂತ ಈಗ ಕೇರಳದಲ್ಲಿ ನಿವೃತ್ತ ಜೀವನ ಸವೆಸುತ್ತಿದ್ದಾರೆ, ಇವರು ವಿಶೇಷ ವ್ಯಕ್ತಿ ಇವರ ಸಾಧನೆ ಅಮೋಘ,ಯಾವುದೇ ಪ್ರಸಿದ್ಧಿಗಾಗಿ, ಪ್ರಶಸ್ತಿ ಸನ್ಮಾನಗಳಿಗಾಗಿ ಸೇವೆ ಮಾಡಿದವರಲ್ಲ ಅದರಿಂದ ಇವರು ಬಲು ದೂರ.

 ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಸಮೀಪದ ಮುಂಬಾಳಿಗೆ ಬಂದು ಗೋಕುಲ್ ಪಾರಂ ಸ್ಥಾಪಿಸಿ ಸಾಗರ ತಾಲೂಕಿನಲ್ಲಿ ಇವರು ಮಾಡಿದ ದೂರದೃಷ್ಟಿಯ social economical development program ಬಗ್ಗೆ ಎಷ್ಟು ಹೇಳಿದರೂ ಕಡಿಮೆ.

  ಇವರು ಜನಿಸಿದ್ದು ಕೇರಳದಲ್ಲಿ ಮಾತೃ ಭಾಷೆ ಮಲೆಯಾಳಂ, ಇವರ ವಿದ್ಯಾಭ್ಯಾಸ ಕ್ರೈಸ್ತರ ಪರಮೊಚ್ಚ ಧರ್ಮಗುರು ಪೋಪ್ ಇರುವ ವ್ಯಾಟಿಕನ್ ನಲ್ಲಿ.

   ಕೃಷಿ ಮತ್ತು ಮಹಾತ್ಮಾ ಗಾಂಧಿ ಇವರ ಉನ್ನತ ಶಿಕ್ಷಣದ ವಿಷಯಗಳು, ಇವರು ಕರ್ನಾಟಕಕ್ಕೆ ಬಂದು ನಂಜನಗೂಡಿನಲ್ಲಿ ಆರಾಧ್ಯ ಎಂಬುವವರಿಂದ ಕನ್ನಡ ಬಾಷೆಯ ಅಕ್ಷರಾಭ್ಯಾಸ ಮಾಡಿ ನಂತರ ಒಂದನೆ ತರಗತಿ, ಎರಡನೆ ತರಗತಿ ಮಕ್ಕಳ ಜೊತೆ ಕುಳಿತು ಪಾಠ ಕಲಿತು ನಂತರ ಕನ್ನಡ ಬರೆಯಲು ಮತ್ತು ಓದಲು ಕಲಿತ ದಿನಗಳ ನೆನಪು ಮಾಡಿಕೊಂಡಿದ್ದಾರೆ ಈ ಸಂದರ್ಶನದಲ್ಲಿ.

    ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದರೂ ನನ್ನ ಮಕ್ಕಳನ್ನ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದಿಸಿದ್ದೆ ಆಗಲೇ ನಮ್ಮ ಹಳ್ಳಿಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರೂ ಕಾನ್ವೆಂಟ್ ಶಾಲೆಗೆ ತಮ್ಮ ಮಕ್ಕಳನ್ನು ಕಳಿಸುವ ಭರಾಟೆ ಕಾಲ.

   ನಾನು ನನ್ನ ಮಕ್ಕಳನ್ನ ಸರ್ಕಾರಿ ಅಂಗನವಾಡಿಯಿಂದ ಪಿಯುಸಿ ತನಕ ಕನ್ನಡ ಮಾಧ್ಯಮದಲ್ಲೇ ಓದಿಸಿ ಅವರಿಗೆ ಇಂಗ್ಲೀಷ್ ಸ್ಪೀಕಿಂಗ್ ತರಬೇತಿ ಕೊಡಿಸಿ ಉನ್ನತ ವಾಸಂಗಕ್ಕೆ ಕಳಿಸಿದ್ದೆ.

   ಆದರೆ ನನ್ನ ಮುಂದಿನ ಮೊಮ್ಮಕ್ಕಳ ಕಾಲದಲ್ಲಿ ಈ ರೀತಿ ಕನ್ನಡ ಕಲಿಯುತ್ತಾರೆಂಬ  ನಂಬಿಕೆ ನನಗಿಲ್ಲ ಯಾಕೆಂದರೆ ಕನ್ನಡ ನಾಡಲ್ಲಿ ಕನ್ನಡದಲ್ಲಿ ಮಕ್ಕಳು ಓದಿ ಬರೆಯುವುದು ಹೊಸ ತಲೆಮಾರಿಗೆ ಇಷ್ಟ ಆಗುತ್ತಿಲ್ಲ.

   ಮಕ್ಕಳ ಭವಿಷ್ಯಕ್ಕೆ ಇಂಗ್ಲೀಷ್ ಬೇಕು ಸರಿ ಆದರೆ ಮಾತೃ ಭಾಷೆ ಓದಿ ಬರೆಯಲು ಅವರಿಗೆ ಕಲಿಸಲು ಏಕೆ ವಿರೋಧ ಗೊತ್ತಿಲ್ಲ.

  ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಕನ್ನಡ ವೀರರಲ್ಲೂ ಇದಕ್ಕೆ ಉತ್ತರ ಇಲ್ಲ, ಸದ್ಯದಲ್ಲೇ ಕನ್ನಡ ರಾಜ್ಯೋತ್ಸದ ಆಚರಣೆ ಇದೆ.

  ಇದೆಲ್ಲದರ ಮಧ್ಯ ಪಾದರ್ ಜೋಸೆಪ್ ನಮಗೆ ಆದರ್ಶರಾಗಿ ಕಾಣುತ್ತಾರೆ ಸ್ವತಃ ತಮ್ಮ ಮನೆಯಲ್ಲಿ ಆಚರಣೆ -ಪಾಲನೆ ಮಾಡದೆ ಕನ್ನಡ ಭಾಷೆ ಬೆಳೆದೀತೆ -ಉಳಿದೀತೆ? ..

   ಈ ಸಂದರ್ಶನ ನೋಡಿ ಇಷ್ಟ ಆದರೆ ಶೇರ್ ಮಾಡಿ.

#pvjosep #josfather #kannada #rajyotsava #christianreligion #kerala #maleyalam #vyatican 
#itali #mumbalu #anandapuram #gokulfarm

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...