#ಡಾಕ್ಟರ್_ಕೆ_ವಿ_ಅಕ್ಷರ ಹೆಗ್ಗೋಡಿನ ನೀನಾಸಂ #ಕೆ_ವಿ_ಸುಬ್ಬಣ್ಣರ ಪುತ್ರ ಕೆ.ವಿ.ಅಕ್ಷರ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ. ಇದು ನಮ್ಮ ಸಾಗರ ತಾಲೂಕಿಗೆ ಸಂದ ಗೌರವವಾಗಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವ ಮೇ.6ರಂದು ಬುಧವಾರ ಬೆಳಿಗ್ಗೆ 10-30ಕ್ಕೆ ಶಂಕರಘಟ್ಟದ ವಿವಿಯ ಜ್ಞಾನಸಹ್ಯಾದ್ರಿ ಆವರಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಕುವೆಂಪು ವಿವಿ ಕುಲಪತಿ #ಪ್ರೊ_ಶರತ್_ಅನಂತಮೂರ್ತಿ ತಿಳಿಸಿದ್ದಾರೆ. ಖ್ಯಾತ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ #ಕೋಣಂದೂರು_ಲಿಂಗಪ್ಪ, ಹಿರಿಯ ರಂಗಕರ್ಮಿ ಮತ್ತು ನೀನಾಸಂ ನಿರ್ದೇಶಕ #ಕೆ_ವಿ_ಅಕ್ಷರ ಮತ್ತು ರಾಷ್ಟ್ರೀಯ ಮೌಲ್ಯ ಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ನ ಮಾಜಿ ನಿರ್ದೇಶಕ #ಪ್ರೊ_ಎಚ್_ಎ_ರಂಗನಾಥ್ ಅವರಿಗೆ ಕುವೆಂಪು ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟ ರೇಟ್ (ಡಿ. ಲಿಟ್) ಪದವಿ ನೀಡಿ ಗೌರವಿಸಲಿದೆ ಎಂದು ಘೋಷಿಸಿದ್ದಾರೆ. ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ರಂಗಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕೆ.ವಿ. ಅಕ್ಷರ ಅವರು ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕರು, ಖ್ಯಾತ ರಂಗ ನಿರ್ದೇಶಕರಾಗಿರುವ ಅವರು ಸೃಜನಶೀಲ ಸಾಹಿತಿ, ನಾಟಕ, ಕವನ, ಪ್ರಬಂಧಗಳ...