Skip to main content

Posts

Showing posts with the label Historical SULEKERE

# ಸೂಳೆಕೆರೆ ಇತಿಹಾಸ ಅಂತರ್ ಜಾತಿ ಪ್ರೇಮ ವಿವಾಹದ ದುರಂತದ ಕಥೆ #

# ಸೂಳೆಕೆರೆ (ಶಾಂತಿ ಸಾಗರ) ತುಂಬಿದೆ#  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಈ ಬಾರಿ ಅದೂ ಅಕ್ಟೋಬರ್ ತಿಂಗಳ ಕೊನೆಯಲ್ಲಿ ಬಂದಿರುವ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ, ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಮೊನ್ನೆ ಶುಕ್ರವಾರ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ ಹೆಸರು ಬದಲಿಸಿ ಶಾಂತವ್ವಳ ಸ್ಮಾರಕವಾಗಿ ಶಾಂತಿ ಸಾಗರ ಎಂದೂ ಕರೆಯುತ್ತಾರೆ.   ಏಷ್ಯಾದಲ್ಲಿನ ಎರಡನೇ ಅತಿ ದೊಡ್ಡ...