ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವರದಳ್ಳಿಯ ತಪಸ್ವಿ ಶ್ರೀಧರ ಸ್ವಾಮಿಗಳು. ವರದಳ್ಳಿ ಶ್ರೀಧರ ಸ್ವಾಮಿಗಳ ಬಗ್ಗೆ ಕೇಳಿದ್ದು, ಓದಿದ್ದು ಮತ್ತು ಅವರ ಒಡನಾಡಿಗಳನ್ನ ಭೇಟಿ ಮಾಡಿದ್ದು ಬಿಟ್ಟರೆ ಅವರನ್ನ ಪ್ರತ್ಯಕ್ಷವಾಗಿ ನೋಡಿಲ್ಲ. ನಾವು ಚಿಕ್ಕವರಿದ್ದಾಗ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ಆಗಿನ ಕಾಲದ ಖ್ಯಾತ ಚಲನಚಿತ್ರ ನಟ ಉದಯ ಕುಮಾರ್ ಅರಳಿ ಮರದ ಗ್ಯಾರೇಜ್ ಹತ್ತಿರ ಬಂದಿದ್ದಾರೆ ಅಂತ ಊರಿನ ಜನರೆಲ್ಲ ಗುಂಪು ಗುಂಪಾಗಿ ಓಡುತ್ತಿದ್ದರು, ನಾವು ಚಿಕ್ಕ ಮಕ್ಕಳೆಲ್ಲ ಅವರನ್ನ ಹಿಂಬಾಲಿಸಿದೆವು. ಅಲ್ಲಿ ಒಂದು ಬಿಳಿ ಅಂಬಾಸಡರ್ ಕಾರು ನಿಂತಿದ್ದು ಅದರ ಅಡಿಯಲ್ಲಿ ಮಲಗಿ ಮೆಕ್ಯಾನಿಕ್ ದುರಸ್ತಿ ಮಾಡುತ್ತಿದ್ದರೆ ಎತ್ತರದ ಮಣ್ಣು ದಿಬ್ಬದ ಮೇಲೆ ನಮ್ಮ ನಟ ಉದಯ ಕುಮಾರ್ ಸಿಗರೇಟು ಸೇದಿ ಹೊಗೆ ಬಿಡುತ್ತಿದ್ದರು. ಯಾರೂ ಅವರ ಹತ್ತಿರ ಮಾತಾಡುವ ದೈಯ೯ ವಹಿಸಲಿಲ್ಲ ಆದರೆ ನೆರೆದ ಜನ ಮಾತಾಡಿಕೊಳ್ಳುತ್ತಿದ್ದ ಮಾತಿನ ಸಾರಾಂಶವೆಂದರೆ ವರದಳ್ಳಿಯಲ್ಲಿ ತಪಸ್ಸು ಮಾಡುತ್ತಿದ್ದ ಶ್ರೀಧರ ಸ್ವಾಮಿಗಳು ದೇಹತ್ಯಾಗ ಮಾಡಿದ್ದಾರೆ ಅದನ್ನ ಕೇಳಿ ಅವರ ಭಕ್ತ ಮತ್ತು ಶಿಷ್ಯರಾದ ಖ್ಯಾತ ಚಿತ್ರ ನಟ ಉದಯ ಕುಮಾರ್ ಬರುವಾಗ ಕಾರು ಹಾಳಾಗಿ ದುರಸ್ತಿಗಾಗಿ ನಿಂತಿದ್ದಾರೆ, ದುಃಖದಲ್ಲಿ ಇರೋದರಿಂದ ಆ ರೀತಿ ಸಿಗರೇಟು ಸೇದಿ ಬೂದಿ ಮಾಡುತ್ತಿದ್ದಾರೆ ಅವರ ಹತ್ತಿರ ಯಾರೂ ಮಾತಾಡ ಬೇಡಿ ಅಂತ ...